ಬಾಗಲಕೋಟೆ: ಆರೋಗ್ಯ ರಕ್ಷಿಸುವ ಅತ್ಯಂತ ಪರಿಣಾಮಕಾರಿ ವಿಧಾನಗಳಲ್ಲಿ ಲಸಿಕೆ ಕೂಡ ಒಂದಾಗಿದೆ. ಲಸಿಕೆ ಹಲವು ಗಂಭೀರ ರೋಗಳಿಂದ ರಕ್ಷಿಸುತ್ತದೆ ಎಂದು ಸಜ್ಜಲಶ್ರೀ ನರ್ಸಿಂಗ್ ವಿಜ್ಞಾನ ಕಾಲೇಜಿನ ಪ್ರಾಚಾರ್ಯ ಡಾ.ದಿಲೀಪ್ ನಾಟೇಕರ ಹೇಳಿದರು.

ಬಿವಿವಿ ಸಂಘದ ಸಜ್ಜಲಶ್ರೀ ನರ್ಸಿಂಗ್ ವಿಜ್ಞಾನ ಕಾಲೇಜಿನ ಚಿಕ್ಕ ಮಕ್ಕಳ ಶುಶ್ರೂಷಾ ವಿಭಾಗದ ವತಿಯಿಂದ ರಾಷ್ಟ್ರೀಯ ಲಸಿಕಾ ಸಪ್ತಾಹ ಕಾರ್ಯಕ್ರಮವನ್ನು ‘ಪ್ರತಿ ತಲೆಮಾರಿಗೆ ಲಸಿಕೆಗಳು ಫಲಕಾರಿ’ ಎಂಬ ಶೀರ್ಷಿಕೆಯಡಿಯಲ್ಲಿ ಹಾನಗಲ್ ಕುಮಾರೇಶ್ವರ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಚಿಕ್ಕಮಕ್ಕಳ ವಿಭಾಗದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿತ್ತು.

ಮುಖ್ಯ ಅತಿಥಿ, ಎಚ್ಎಸ್ಕೆ ಆಸ್ಪತ್ರೆಯ ಚಿಕ್ಕ ಮಕ್ಕಳ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಅನಿತಾ ದಡ್ಡಿ ಮಾತನಾಡಿ, ಲಸಿಕೆಗಳನ್ನು ಮಕ್ಕಳಿಗೆ ಸರಿಯಾದ ಸಮಯದಲ್ಲಿ ನೀಡುವುದು ಬಹಳ ಮುಖ್ಯ ಎಂದರು.

ಕಾಲೇಜಿನ ಚಿಕ್ಕ ಮಕ್ಕಳ ವಿಭಾಗದ ಮುಖ್ಯಸ್ಥರಾದ ಡಾ.ದಾನೇಶ್ವರಿ ಹಿರೇಮಠ ಮಾತನಾಡಿದರು.

ವಿದ್ಯಾರ್ಥಿಗಳು ಕಿರುನಾಟಕ ಪ್ರದರ್ಶನದ ಮೂಲಕ ಲಸಿಕೆಗಳ ಮಹತ್ವದ ಬಗ್ಗೆ ಮಾಹಿತಿ ನೀಡಿದರು.ಚಿಕ್ಕ ಮಕ್ಕಳ ವಿಭಾಗದ ಪ್ರಾಧ್ಯಾಪಕರಾದ ಡಾ.ಪ್ರಶಾಂತ ಕುಲಕರ್ಣಿ, ಡಾ.ನಿಂಗನಗೌಡ ಪಾಟೀಲ, ಸಹಾಯಕ ಪ್ರಾಧ್ಯಾಪಕ ಸಂತೋಷ ಸಜ್ಜನ, ಉಪನ್ಯಾಸಕರಾದ ಚಂದ್ರಾ ಜಾಟ್, ರಾಜಶೇಖರ ಕಾಬನೂರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-19-1345662347

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.