ಬಾಗಲಕೋಟೆ: ಮಹಿಳಾ ಮೀಸಲಾತಿ, ಮಹಿಳೆಯರ ರಾಜಕೀಯ ಸಬಲೀಕರಣಕ್ಕೆ ಸಂಪೂರ್ಣ ಬೆಂಬಲವಿದೆ. ಆದರೆ, ಅದರ ನೆಪದಲ್ಲಿ ಕ್ಷೇತ್ರಗಳ ಪುನರ್ವಿಂಗಡಣೆಗೆ ಅನುಸರಿಸುತ್ತಿರುವ ಪ್ರಜಾಪ್ರಭುತ್ವ ವಿರೋಧಿ ನಡೆಯನ್ನು ಖಂಡಿಸುತ್ತೇವೆ ಎಂದು ಕಾಂಗ್ರೆಸ್ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ನಾಗರಾಜ ಹದ್ಲಿ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಮಹಿಳಾ ಮೀಸಲಾತಿ ಕುರಿತು ನಮ್ಮ ನಿಲುವು ಸ್ಪಷ್ಟ ಮತ್ತು ಅಚಲವಾಗಿದೆ. ಕ್ಷೇತ್ರ ಪುನರ್ವಿಂಗಡಣೆ ಎಂಬ ಮಹತ್ವದ ಪ್ರಕ್ರಿಯೆಯನ್ನು ಬಿಜೆಪಿ ತನ್ನ ರಾಜಕೀಯ ಸ್ವಾರ್ಥಕ್ಕಾಗಿ ದುರುಪಯೋಗಪಡಿಸಿಕೊಂಡಿದೆ ಎಂದು ಟೀಕಿಸಿದ್ದಾರೆ.

ಜನರ ನಿಜವಾದ ಅಗತ್ಯಗಳು, ಸಾಮಾಜಿಕ ಸಮತೋಲನ ಮತ್ತು ಪ್ರಾದೇಶಿಕ ನ್ಯಾಯವನ್ನು ಸಂಪೂರ್ಣವಾಗಿ ಕಡೆಗಣಿಸಿ, ಕೇವಲ ಚುನಾವಣಾ ಲಾಭಕ್ಕಾಗಿ ಕ್ಷೇತ್ರಗಳ ಗಡಿ ರೇಖೆಗಳನ್ನು ಬದಲಾಯಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಮಹಿಳಾ ಮೀಸಲಾತಿಯ ಹೆಸರಿನಲ್ಲಿ ನಡೆಯುತ್ತಿರುವ ಸ್ಪಷ್ಟ ರಾಜಕೀಯ ವಂಚನೆ. ಜನರ ವಿಶ್ವಾಸಕ್ಕೆ ಧಕ್ಕೆ ತರುವ, ಪ್ರಜಾಪ್ರಭುತ್ವದ ಆತ್ಮವನ್ನೇ ಕುಗ್ಗಿಸುವ ಈ ರೀತಿಯ ಕ್ರಮಗಳನ್ನು ಖಂಡಿಸುತ್ತೇವೆ. ಬಿಜೆಪಿಯ ಈ ಕುತಂತ್ರ ಯಾವತ್ತೂ ಯಶಸ್ವಿಯಾಗಲು ಬಿಡುವುದಿಲ್ಲ. ಜನರ ಹಕ್ಕುಗಳನ್ನು ಕಸಿದುಕೊಳ್ಳುವ ಯಾವುದೇ ಪ್ರಯತ್ನದ ವಿರುದ್ಧ ತೀವ್ರ ಹೋರಾಟ ನಡೆಸುತ್ತೇವೆ ಎಂದಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-19-247674795

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.