ಮಂಗಳವಾರ, ಮೇ 18, 2021
24 °C

ಬನಶಂಕರಿದೇವಿ ದೇವಿ ಜಾತ್ರೆ ರದ್ದು: ಭಕ್ತರ ಪ್ರವೇಶಕ್ಕೆ ನಿರ್ಬಂಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಾದಾಮಿ: ಜ.28ರಂದು ನಡೆಯಬೇಕಿದ್ದ ಬನಶಂಕರಿದೇವಿ ಜಾತ್ರೆಯನ್ನು ಕೋವಿಡ್ ಕಾರಣದಿಂದ ರದ್ದುಪಡಿಸಲಾಗಿದ್ದು, ಬನಶಂಕರಿ ದೇವಿಯ ದರ್ಶನಕ್ಕೆ ಭಕ್ತರು ಬರದಂತೆ ಜ.31ರವರೆಗೆ ನಿರ್ಬಂಧ ವಿಧಿಸಲಾಗಿದೆ.

ದೇವಾಲಯದ ಮಹಾದ್ವಾರವನ್ನು ಬಂದ್ ಮಾಡಲಾಗಿದೆ. ಭಕ್ತರು ದೇವಾಲಯಕ್ಕೆ ಪ್ರವೇಶಿಸದಂತೆ ತಡೆಯಲು ಬಾದಾಮಿ ರಸ್ತೆ, ಗದಗ ರಸ್ತೆಯಲ್ಲಿ ಬ್ಯಾರಿಕೇಡ್ ಹಾಕಲಾಗಿದೆ.

‘ಜಿಲ್ಲಾಧಿಕಾರಿ ಆದೇಶದಂತೆ ಈ ವರ್ಷದ ಜಾತ್ರೆಯನ್ನು ರದ್ದು ಮಾಡಲಾಗಿದೆ. ಭಕ್ತರು ಪಾದಯಾತ್ರೆ ಮತ್ತು ವಾಹನಗಳ ಮೂಲಕ ಬನಶಂಕರಿಗೆ ಬರಬಾರದು. ಮನೆಯಲ್ಲಿಯೇ ದೇವಿಯನ್ನು ಆರಾಧಿಸಬೇಕು’ ಎಂದು ಪಿಎಸ್ಐ ಪ್ರಕಾಶ ಬಣಕಾರ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು