ಬಾಗಲಕೋಟೆ: ಒಳಮೀಸಲಾತಿ ರೋಸ್ಟರ್ ಹಂಚಿಕೆ ವಿರೋಧಿಸಿ, ಹಳೆಯ ಮೀಸಲಾತಿ ನಿಯಮದಂತೆ ತ್ವರಿತ ನೇಮಕಾತಿ ನಡೆಸಲು ಒತ್ತಾಯಿಸಿ ಮಾ.24ರಂದು ಬೆಂಗಳೂರು ಚಲೋ ಹಮ್ಮಿಕೊಳ್ಳಲಾಗಿದೆ ಎಂದು ಮುಖಂಡ ಅಶೋಕ ಲಿಂಬಾವಳಿ ಹೇಳಿದರು.

ಭೋವಿ - ವಡ್ಡರ ಸಮಾಜದಿಂದ ಬಾಗಲಕೋಟೆಯ ಭೋವಿ ಗುರುಪೀಠದಲ್ಲಿ ಮಂಗಳವಾರ ಏರ್ಪಡಿಸಿದ್ದ ಬೆಳಗಾವಿ ವಿಭಾಗ ಮಟ್ಟದ ಜಾಗೃತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬಂಜಾರ, ಭೋವಿ, ಕೊರಮ, ಕೊರಚ, ಚರ್ಮಕಾರ, ಸೂಕ್ಷ್ಮ ಪರಿಶಿಷ್ಟ ಜಾತಿಗಳು ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

ರಾಜ್ಯ ಸರ್ಕಾರದ ವಿವಿಧ ವಿಶ್ವವಿದ್ಯಾಲಯ, ಪ್ರಾಧಿಕಾರ ಮತ್ತು ಕೆಲ ಇಲಾಖೆಗಳ ನೇಮಕಾತಿ ಅಧಿಸೂಚನೆಯಲ್ಲಿ ಪರಿಶಿಷ್ಟ ಜಾತಿಗಳ ಪ್ರವರ್ಗ ‘ಬಿ’ ಮತ್ತು ಪ್ರವರ್ಗ ‘ಸಿ’ ಗುಂಪಿಗೆ ಶೂನ್ಯ ಹುದ್ದೆಗಳನ್ನು ಹಂಚಿಕೆ ಮಾಡಲಾಗಿತ್ತು. ಒಳ ಮೀಸಲಾತಿ ಎಷ್ಟೊಂದು ಅನ್ಯಾಯ ಮತ್ತು ಅಪ್ರಾಯೋಗಿಕ ಎಂಬುದು ಈ ಮೂಲಕ ಜಗಜ್ಜಾಹೀರು ಆಗಿದೆ ಎಂದರು.

ಹಳೆಯ ಮೀಸಲಾತಿಯ ನಿಯಮದಂತೆ ಶೇ50ರ ಅನ್ವಯ ನೇಮಕಾತಿ ಮತ್ತು ಶೈಕ್ಷಣಿಕ ಪ್ರವೇಶ ಪ್ರಕ್ರಿಯೆ ಮುಂದುವರಿಸುವುದಾಗಿ ರಾಜ್ಯ ಸರ್ಕಾರ ಪ್ರಕಟಣೆ ಮಾಡಿರುವುದು ಸ್ವಾಗತಾರ್ಹ. ತ್ವರಿತವಾಗಿ ನೇಮಕಾತಿ ಅಧಿಸೂಚನೆ ಹೊರಡಿಸಬೇಕು ಎಂದು ಒತ್ತಾಯಿಸಿದರು.

ಈ ಹಿಂದೆ ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ (ಶೇ17) ಮತ್ತು ಪರಿಶಿಷ್ಟ ಪಂಗಡಗಳ (ಶೇ7) ಮೀಸಲಾತಿಯನ್ನು ಹೆಚ್ಚಳ ಮಾಡಿರುವ ಆದೇಶವನ್ನು ಸಂವಿಧಾನದ 9ನೇ ಷೆಡ್ಯೂಲ್ನಲ್ಲಿ ಸೇರಿಸಲು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿಕೊಡಲು ಪ್ರಧಾನಿಗಳ ಬಳಿ ನಿಯೋಗ ಹೋಗಬೇಕು. ಕೇಂದ್ರದ ಮೇಲೆ ಒತ್ತಡ ಹೇರಬೇಕು ಎಂದು ಆಗ್ರಹಿಸಿದರು.

ದೇಶವ್ಯಾಪಿ ನಡೆಯುತ್ತಿರುವ ಜನಗಣತಿ ದತ್ತಾಂಶ ಬರುವವರೆಗೆ ಏಕಪಕ್ಷೀಯ ನಿರ್ಧಾರ ಮಾಡಬಾರದು. ರಾಜ್ಯದಲ್ಲಿ ಒಳಮೀಸಲಾತಿ ಹಂಚಿಕೆ ಪ್ರಕ್ರಿಯೆ ನಡೆಸುವ ಮುನ್ನ ನಮ್ಮ ಸಮುದಾಯಗಳ ಮುಖಂಡರ ಜೊತೆಗೆ ಸಮಾಲೋಚನೆ ಮಾಡಬೇಕು. ಈಗಾಗಲೇ ಹೊರಡಿಸಿರುವ ವಿವಿಧ ನೇಮಕಾತಿ ಅಧಿಸೂಚನೆಗಳನ್ನು ರದ್ದುಗೊಳಿಸಬೇಕು. ಅವೈಜ್ಞಾನಿಕ ಒಳ ಮೀಸಲಾತಿಯಿಂದ ಹಿಂದೆ ಸರಿಯಬೇಕು. ಯಾರದ್ದೋ ಒತ್ತಡಕ್ಕೆ ಮಣಿದು ಏಕಪಕ್ಷೀಯವಾಗಿ ವರ್ಗೀಕರಣ ಮಾಡಬಾರದು ಎಂದು ಆಗ್ರಹಿಸಿದರು.

ಭೋವಿ ಗುರುಪೀಠದ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಭೋವಿ ಅಭಿವೃದ್ಧಿ ನಿಗಮದ ಎಂ.ರಾಮಪ್ಪ, ಸಿದ್ದು ಬಂಡಿ, ರವಿ ಪೂಜಾರ, ರಾಮು ಹೋಸಪೇಟೆ, ಪರಶುರಾಮ ಕಲಕುಟ್ಕರ್, ಶಿವಾನಂದ ಕನ್ನೂರು, ರಾಮಯ್ಯ ಪೂಜಾರಿ, ಪರಶುರಾಮ ಕರಡಿಕೊಳ, ಕಮತಗಿ ವೆಂಕಟೇಶ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.