ಮಂಗಳವಾರ, ಜನವರಿ 26, 2021
28 °C
ಸಿಎಂ ಜೊತೆ ಮುಂದಿನ ಚರ್ಚೆ

ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ 2ಎ ಮೀಸಲಾತಿಗಾಗಿ ಹೋರಾಟ: ಸಂಧಾನ ವಿಫಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಗಲಕೋಟೆ: ಪಂಚಮಸಾಲಿ ಸಮುದಾಯಕ್ಕೆ 2ಎ ಪ್ರವರ್ಗದ ಮೀಸಲಾತಿ ನೀಡಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕೂಡಲಸಂಗಮದಲ್ಲಿ ಸಚಿವ ಸಿ.ಸಿ.ಪಾಟೀಲ ಹಾಗೂ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಶನಿವಾರ ನಡೆದ ಸಂಧಾನ ಸಭೆಯ ಮಾತುಕತೆ ವಿಫಲವಾಯಿತು.

ಮೀಸಲಾತಿಗೆ ಆಗ್ರಹಿಸಿ ಜನವರಿ 14 ರಂದು ಸ್ವಾಮೀಜಿ ನಡೆಸಲು ಉದ್ದೇಶಿಸಿದ್ದ ಪಾದಯಾತ್ರೆ ಹಾಗೂ ಹೋರಾಟ ಕೈ ಬಿಡುವಂತೆ ಮನವೊಲಿಸಲು ಸಚಿವ ಸಿ.ಸಿ.ಪಾಟೀಲ ಮುಂದಾಗಿದ್ದರು. ಹೋರಾಟ ಕೈಬಿಟ್ಟು ಬೇಡಿಕೆ ಈಡೇರಿಕೆಗೆ ಸಮಯಾವಕಾಶ ನೀಡುವಂತೆ ಸಚಿವರು ಮನವಿ ಮಾಡಿದರು. ಆದರೆ, ಹೋರಾಟದ ಪಟ್ಟು ಸಡಿಲಿಸಲು ಸ್ವಾಮೀಜಿ ಹಾಗೂ ಸಮಾಜದ ಮುಖಂಡರು ಒಪ್ಪಲಿಲ್ಲ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜೊತೆ ಮುಂದಿನ ಹಂತದಲ್ಲಿ ಮಾತುಕತೆ ನಡೆಸಲು ಹಾಗೂ ಸರ್ಕಾರದ ಸ್ಪಂದನೆಯ ಬಗ್ಗೆ ಜನವರಿ 14ರವರೆಗೆ ಕಾದು ನೋಡಲು ಸಭೆ ತೀರ್ಮಾನಿಸಿತು.

ಇಂದಿನ ಸಭೆಯ ನಿಣ೯ಯಗಳನ್ನು ಭಾನುವಾರ ಸಿಎಂ ಜೊತೆ ಚಚಿ೯ಸಲಿದ್ದೇನೆ. ಬಳಿಕ ಸಿಎಂ ಜೊತೆ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಅವರನ್ನು  ಮಾತುಕತೆಗೆ ಆಹ್ವಾನಿಸಲಾಗುವುದು ಎಂದು ಸಚಿವ ಸಿ.ಸಿ.ಪಾಟೀಲ ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು