ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಸವಕಲ್ಯಾಣ, ಮಸ್ಕಿ ಉಪಚುನಾವಣೆ; ಬಿಜೆಪಿ ಜೊತೆ ಹೊಂದಾಣಿಕೆ ಇಲ್ಲ ಎಂದ ಕುಮಾರಸ್ವಾಮಿ

Last Updated 31 ಜನವರಿ 2021, 8:01 IST
ಅಕ್ಷರ ಗಾತ್ರ

ಬಾಗಲಕೋಟೆ: ಬಿಜೆಪಿ ಜೊತೆ ಹೊಂದಾಣಿಕೆ ಬರೀ ವಿಧಾನ ಪರಿಷತ್ ಸಭಾಪತಿ ಹಾಗೂ ಉಪಸಭಾಪತಿ ಆಯ್ಕೆಗೆ ಮಾತ್ರ ಸೀಮಿತ. ಬಸವಕಲ್ಯಾಣ, ಮಸ್ಕಿ ವಿಧಾನಸಭೆ ಉಪಚುನಾವಣೆಯಲ್ಲಿ ಹೊಂದಾಣಿಕೆ ಪ್ರಶ್ನೆಯೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅನಿವಾರ್ಯತೆ ಇದ್ದ ಕಾರಣ ಈಗ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದೇವೆ ಎಂದರು.

ಬಿಜೆಪಿ ಜೊತೆ ಹೊಂದಾಣಿಕೆಯನ್ನು ಟೀಕಿಸುತ್ತಿರುವ ಕಾಂಗ್ರೆಸ್ ನಾಯಕರು, ಈ ಹಿಂದೆ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಹೊರಟ್ಟಿ ಅವರನ್ನು ಮೇಲ್ಮನೆ ಸಭಾಪತಿ ಮಾಡುವಂತೆ ಕೇಳಿದಾಗ ಏಕೆ ಒಪ್ಪಿರಲಿಲ್ಲ ಎಂದು ಪ್ರಶ್ನಿಸಿದರು. ಆಗ ಸ್ವತಃ ದೇವೇಗೌಡರೇ ಸೋನಿಯಾ ಗಾಂಧಿ ಅವರೊಂದಿಗೆ ಚರ್ಚಿಸಿದ್ದರೂ ಪ್ರಯೋಜನವಾಗಿರಲಿಲ್ಲ. ಬೇಕಾದಾಗ ಜೆಡಿಎಸ್ ಪಕ್ಷವನ್ನು ಬಳಸಿ ಬಿಸಾಕುವ ಕಾಂಗ್ರೆಸ್ ನಾಯಕರಿಗೆ ಈಗ ಮಾತನಾಡುವ ಹಕ್ಕಿಲ್ಲ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT