ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು ಗಲಭೆ ಪೂರ್ವಯೋಜಿತ: ಡಿಸಿಎಂ ಗೋವಿಂದ ಕಾರಜೋಳ

Last Updated 14 ಆಗಸ್ಟ್ 2020, 16:01 IST
ಅಕ್ಷರ ಗಾತ್ರ

ಬಾಗಲಕೋಟೆ: ಬೆಂಗಳೂರಿನ ಡಿ.ಜೆ ಹಳ್ಳಿ ಹಾಗೂ ಕೆ.ಜೆ ಹಳ್ಳಿಯಲ್ಲಿ ನಡೆದ ಗಲಭೆ, ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಮೇಲಿನ ದಾಳಿ ಪೂರ್ವ ನಿಯೋಜಿತ ಕೃತ್ಯ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಶಾಸಕರ ಮನೆ ಮೇಲೆ ನಡೆದ ದಾಳಿಯ ವಿರುದ್ಧ ಧ್ವನಿ ಎತ್ತದ ಕಾಂಗ್ರೆಸ್ ಪಕ್ಷದ ವರ್ತನೆ ಆ ಪಕ್ಷದ ಶಕ್ತಿ ಕುಗ್ಗಿರುವುದನ್ನು ತೋರಿಸುತ್ತದೆ ಎಂದರು.

ಕಾಂಗ್ರೆಸ್ ಪಕ್ಷದ ಶಾಸಕರ ಮನೆಯ ಮೇಲೆ ದಾಳಿ ನಡೆದರೂ ಸಹ ಪಕ್ಷದ ಮುಖಂಡರು ಧ್ವನಿ ಎತ್ತುವುದಾಗಲಿ, ಅದನ್ನು ಖಂಡಿಸುವ ಶಕ್ತಿಯಾಗಲಿ ಆ ಪಕ್ಷಕ್ಕೆ ಉಳಿದಿಲ್ಲ ಎಂದು ಕಾರಜೋಳ ಲೇವಡಿ ಮಾಡಿದರು.

ಈ ಘಟನೆಯಲ್ಲಿ ಯಾರೇ ತಪ್ಪಿತಸ್ಥರು ಇದ್ದರೂ ಸರ್ಕಾರ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದೆ ಎಂದರು.ಶಾಸಕ ವೀರಣ್ಣ ಚರಂತಿಮಠ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT