ಗುಳೇದಗುಡ್ಡ: ನೂತನ ಸಚಿವ ಸಂಪುಟದಲ್ಲಿ ಬಾದಾಮಿ ಮತಕ್ಷೇತ್ರದ ಶಾಸಕರಾದ ಭೀಮಸೇನ ಚಿಮ್ಮನಕಟ್ಟಿ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಇಲ್ಲಿನ ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ವರಿಷ್ಠರನ್ನು ಒತ್ತಾಯಿಸಿದ್ದಾರೆ.

ಮಂಗಳವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರೆದ ಸುದ್ದಿಗೊಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ, ಕೆಎಂಎಫ್ ನಿರ್ದೇಶಕ ಸಿದ್ದು ಕೋಲಾರ ಮಾತನಾಡಿ, ಬಾದಾಮಿ ಮತಕ್ಷೇತ್ರದ ಶಾಸಕರಾದ ಭೀಮಸೇನ ಚಿಮ್ಮನಕಟ್ಟಿ ಅವರು ಹಿಂದುಳಿದ ವರ್ಗದ ಬಡವರ, ದೀನ, ದಲಿತರ, ನೇಕಾರರ, ರೈತರ, ಅಲ್ಪಸಂಖ್ಯಾತರು ಸೇರಿದಂತೆ ಸರ್ವ ಜನಾಂಗದವರ ಹಿತ ಕಾಪಾಡುವ ಮೂಲಕ ಸ್ಪಂದಿಸುತ್ತಿದ್ದಾರೆ. ಮತಕ್ಷೇತ್ರ ಇನ್ನೂ ಅಭಿವೃದ್ಧಿ ಸಾಧಿಸಲು ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿದರು.

ಗ್ಯಾರಂಟಿ ಯೋಜನೆಯ ತಾಲ್ಲೂಕು ಸದಸ್ಯ ರಂಗನಾಥ ಮೊಕಾಶಿ ಮಾತನಾಡಿ, ‘ಸಮಗ್ರ ಬಾದಾಮಿ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುವ ಇಚ್ಛಾಶಕ್ತಿ ಹೊಂದಿದ ಇಂತಹ ಯುವ ಶಾಸಕರಿಗೆ ಮಂತ್ರಿ ಸ್ಥಾನ ನೀಡಿದರೆ ಉತ್ತರ ಕರ್ನಾಟಕದ ಜನತೆಗೆ ನ್ಯಾಯ ನೀಡಿದಂತಾಗುತ್ತದೆ’ ಎಂದರು.

ಸುದ್ದಿಗೋಷ್ಠಿಯಲ್ಲಿ ಬಾಗಲಕೋಟೆ ಜಿಲ್ಲಾ ಪರಿಶಿಷ್ಟ ಜಾತಿ ವಿಭಾಗದ ಸಂಚಾಲಕ ರಾಜು ಸಂಗಮ, ಪಟ್ಟಣದ ಅಂಜುಮನ್ ಕಮೀಟಿ ಚೇರ್ಮನ್ ರಜಾಕ ಕುದರಿ, ರಮೇಶ ಪೂಜಾರ, ಬಸವರಾಜ ದಳವಾಯಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-19-617810073

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.