ಬೀಳಗಿ: ತಾಲ್ಲೂಕು ವ್ಯಾಪ್ತಿಯಲ್ಲಿ ಕೃಷಿ ಚಟುವಟಿಕೆಗಳಿಗೆ ರೈತರು ಉಪಯೋಗಿಸುವ ಟ್ಯಾಕ್ಟರ್ಗಳಿಗೆ ಡೀಸೆಲ್ ಕೊರತೆಯಾಗದಂತೆ ನಿಗಾವಹಿಸಲು ಕರ್ನಾಟಕ ರಾಜ್ಯ ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಶಿವನಗೌಡ ಪಾಟೀಲ ತಹಶೀಲ್ದಾರ್ ವಿನೋದ ಹತ್ತಳ್ಳಿ ಅವರಿಗೆ ಮನವಿ ಮಾಡಿದರು.

ಕರ್ನಾಟಕ ರಾಜ್ಯ ರೈತ ಸಂಘದ ತಾಲ್ಲೂಕು ಘಟಕದ ಪದಾಧಿಕಾರಿಗಳು ಶನಿವಾರ ಕೃಷಿ ಚಟುವಟಿಕೆಗಳಿಗೆ ಡೀಸೆಲ್ ಕೊರತೆಯಾಗದಿರಲಿ ಎಂದು ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.

ರೈತರು ಟ್ಯಾಕ್ಟರ್ಗಳನ್ನು ತಮ್ಮ ಹಳ್ಳಿಗಳಿಂದ ತೆಗೆದುಕೊಂಡು ಡೀಸೆಲ್ ಪಂಪುಗಳಿಗೆ ಬಂದು ಭರ್ತಿ ಮಾಡಿಕೊಳ್ಳಬೇಕೆಂದರೆ ಮಧ್ಯದ ದಾರಿಯಲ್ಲಿ 5 ರಿಂದ 6 ಲೀಟರ್ ಡೀಸೆಲ್ ಹಾಳಾಗುತ್ತದೆ. ಕಾರಣ ಮೊದಲಿನ ಹಾಗೆ ಕ್ಯಾನ್ ಮುಖಾಂತರ ಡೀಸೆಲ್ ಕೊಡಿಸುವ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದರು.

ರೈತರ ಹೆಸರಿನಲ್ಲಿ ಕಿಸಾನ್ ಸೇವಾ ಕೇಂದ್ರ ಲೈಸನ್ಸ್ ಪಡೆದ ಡೀಸೆಲ್ ಪಂಪುಗಳಲ್ಲಿ ರೈತರಿಗೆ ಹೆಚ್ಚುವರಿ ಸರಕು ಇಟ್ಟುಕೊಂಡು ರೈತರಿಗೆ ತೊಂದರೆ ಆಗದಂತೆ ನೋಡಿಕೊಳ್ಳುವ ವ್ಯವಸ್ಥೆ ಮಾಡಬೇಕು ಎಂದರು.

ದೇಶದ ಆಹಾರ ಭದ್ರತೆ ಗಮನದಲ್ಲಿಟ್ಟುಕೊಂಡು ರೈತರ ಕೃಷಿ ಚಟುವಟಿಕೆಗಳು ನಿರಾತಂಕವಾಗಿ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಅವರು ರೈತರಿಗೆ ಆಗುವ ಸಮಸ್ಯೆ ಬಗೆಹರಿಯದಿದ್ದರೆ ಉಗ್ರ ಹೋರಾಟ ಮಾಡಲಾಗುವುದು ಎಂದು ತಹಶೀಲ್ದಾರ್ ಗಮನಕ್ಕೆ ತಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-19-1970534140

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.