ಬೀಳಗಿ: ‘ಉತ್ಸವಗಳು ಸಂಬಂಧಗಳನ್ನು ಗಟ್ಟಗೊಳಿಸುವುದರ ಜೊತೆಗೆ ಬದುಕಿನ ಮೌಲ್ಯಗಳನ್ನು ತಿಳಿಸಿಕೊಡುತ್ತವೆ. ಸಮಾಜದಲ್ಲಿ ಒಗ್ಗಟ್ಟಿನಿಂದ ಎಲ್ಲರೊಂದಿಗೆ ಬಾಳುವುದನ್ನು ಕಲಿಯಬೇಕು’ ಎಂದು ಹಾಸನ ಜಿಲ್ಲೆ ಅರೆಮಾದನಹಳ್ಳಿ ಸುಜ್ಞಾನ ಪ್ರಭು ಪೀಠ ವಿಶ್ವಬ್ರಾಹ್ಮಣ ಮಾಹಾಸಂಸ್ಥಾನ ಮಠದ ಶಿವಜ್ಞಾನ ತೀರ್ಥ ಸ್ವಾಮೀಜಿ ಹೇಳಿದರು.

ಸ್ಥಳೀಯ ಸಿದ್ದೇಶ್ವರ ನಗರದಲ್ಲಿರುವ ಕಾಳಿಕಾಕಮಠೇಶ್ವರ ದೇವಸ್ಥಾನದ ದಶಮಾನೋತ್ಸವ ಹಾಗೂ ಯುಗಾದಿ ಸಂಭ್ರಮ ಸಮಾರಂಭದ ಅಂಗವಾಗಿ ಭಾನುವಾರ ಏರ್ಪಡಿಸಿದ್ದ ಧಾರ್ಮಿಕ ಸಭೆಯ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ಕೆಪಿಸಿಸಿ ಮಹಿಳಾ ಕಾರ್ಯದರ್ಶಿ ಡಾ.ವಸಂತ ಮುರಳಿ ಮಾತನಾಡಿ, ವಿಶ್ವಕರ್ಮ ಸಮಾಜದಿಂದ ನಿರ್ಮಾಣ ಮಾಡುವ ಸಮುದಾಯ ಭವನಕ್ಕೆ ₹5 ಲಕ್ಷ ಕೊಡುವುದಾಗಿ ವಾಗ್ದಾನ ಮಾಡಿದರು.

ಮುಖಂಡರಾದ ಕೆ.ಎನ್. ಬಡಿಗೇರ, ವಿ.ಎಸ್.ಪತ್ತಾರ, ಈರಣ್ಣ ಪತ್ತಾರ, ಶಂಕರ ಬಡಿಗೇರ, ಎಂ. ಆರ್. ಪತ್ತಾರ, ಗುರುನಾಥ ಪತ್ತಾರ ಭಾಗವಹಿಸಿದ್ದರು. ಶಿಕ್ಷಕ ಎಸ್. ಎಸ್. ಬಡಿಗೇರ ನಿರೂಪಿಸಿದರು. ನಾಗರಾಜ ಟಂಕಸಾಲಿ, ಚಂದ್ರಕಾಂತ ಪತ್ತಾರ, ಮನೋಹರ ಪತ್ತಾರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260323-19-146886840

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.