ಬೀಳಗಿ: ಮಹಾಸಾಧ್ವಿ ಹೇಮರಡ್ಡಿ ಮಲ್ಲಮ್ಮ ಜಾತಿಗಳನ್ನು ಮೀರಿದಾಕೆ. ಹೆಣ್ಣುಕುಲದ ಆದಿಶಕ್ತಿ ಎಂದು ಮಾಜಿ ಸಚಿವ ಎಸ್.ಆರ್. ಪಾಟೀಲ ಹೇಳಿದರು.

ತಾಲ್ಲೂಕಿನ ತುಮ್ಮರಮಟ್ಟಿ ಗ್ರಾಮದಲ್ಲಿ ಬುಧವಾರ ಹೇಮರಡ್ಡಿ ಮಲ್ಲಮ್ಮ ಸೇವಾ ಸಮಿತಿ ಹಾಗೂ ಗ್ರಾಮದ ಹಿರಿಯರ ಸಂಯುಕ್ತ ಆಶ್ರಯದಲ್ಲಿ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಮೂರ್ತಿ ಪ್ರಾಣ ಪ್ರತಿಷ್ಠಾಪನೆ, ದೇವಸ್ಥಾನ ಲೋಕಾರ್ಪಣೆ ಹಾಗೂ ಸಮುದಾಯ ಭವನದ ಅಡಿಗಲ್ಲು ಸಮಾರಂಭದಲ್ಲಿ ಅವರು ಮಾತನಾಡಿದರು.

ಎಸ್.ಆರ್.ಪಾಟೀಲ ಕುಟುಂಬದ ಈ ಸಮುದಾಯ ಭವನ ನಿರ್ಮಾಣದ ಸಂಪೂರ್ಣ ವೆಚ್ಚವನ್ನು ಭರಿಸಲಿದೆ ಎಂದರು.

ಸ್ವಾಮಿ ವಿವೇಕನಂದ ವಿದ್ಯಾ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಎಂ.ಎನ್.ಪಾಟೀಲ ಮಾತನಾಡಿ, ದೇವಸ್ಥಾನ ನಿರ್ಮಾಣಕ್ಕೆ ಭೂ ದಾನ ಹಾಗೂ ಮೂರ್ತಿ ಧಾನ ಮಾಡಿದ ಉಮಾದೇವಿ ಶಿವನಗೌಡ ಪಾಟೀಲ ಹಾಗೂ ದಿ. ಬಸನಗೌಡ ನಾಗನಗೌಡ ಪಾಟೀಲ ಕುಟುಂಬದವರ ಕಾರ್ಯ ಶ್ಲಾಘನೀಯ ಎಂದರು.

ಹರಿಹರ ರಡ್ಡಿ ಗುರುಪೀಠದ ವೇಮನಾನಂದ ಸ್ವಾಮೀಜಿ ಮಾತನಾಡಿದರು. ಗಿರಿಸಾಗರದ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ. ಕುಂದರಗಿಯ ವೀರಸಂಗಮೇಶ್ವರ ಸ್ವಾಮೀಜಿ, ಶ್ರೀಮತಿ ಉಮಾದೇವಿ ಎಸ್.ಪಾಟೀಲ, ಬೀಳಗಿ ಶುಗರ್ಸ್ ನಿರ್ದೇಶಕ ಸುರೇಶಗೌಡ ಪಾಟೀಲ, ಪ್ರಥಮ ದರ್ಜೆ ಗುತ್ತಿಗೆದಾರ ಬಿ.ಎನ್.ನಾಗನಗೌಡರ, ಚಂದ್ರಶೇಖರ ಚನ್ನಪ್ಪನವರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-19-1910626925

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.