ಸೋಮವಾರ, 11 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಧಿಕಾರಿ ಅನುಪಸ್ಥಿತಿ: ಶಾಸಕ ಪಾಟೀಲ ಗರಂ

Published 21 ಸೆಪ್ಟೆಂಬರ್ 2023, 13:53 IST
Last Updated 21 ಸೆಪ್ಟೆಂಬರ್ 2023, 13:53 IST
ಅಕ್ಷರ ಗಾತ್ರ

ಬೀಳಗಿ: ಇಲ್ಲಿನ ವೀರ ಸಿಂಧೂರ ಲಕ್ಷ್ಮಣ ತಾಲ್ಲೂಕ ಕ್ರೀಡಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಶಾಸಕ ಜೆ. ಟಿ. ಪಾಟೀಲ ಅವರು ಅಧಿಕಾರಿ ವಿರುದ್ಧ ಗರಂ ಆದರು.

ಕಾರ್ಯಕ್ರಮ ಆಯೋಜನೆಯ ನೇತೃತ್ವ ವಹಿಸಿದ್ದ ಯುವಜನ ಸೇವಾ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಗುರುಪಾದ ಡೂಗನವರ ಅವರು ಸ್ಥಳದಲ್ಲಿ ಇಲ್ಲದ ಕಾರಣ ಶಾಸಕರು ಕೋಪಗೊಂಡರು.

ಕ್ರೀಡಾಂಗಣದಿಂದ ಹೊರ ನಡೆದು, ಅಧಿಕಾರಿ ವಿರುದ್ಧ ಶಿಸ್ತುಕ್ರಮಕ್ಕೆ ಇಲಾಖೆಯ ಮೇಲಧಿಕಾರಿ ಮತ್ತು ಸಚಿವರಿಗೆ ಸೂಚಿಸುವುದಾಗಿ ಮಾಧ್ಯಮದವರಿಗೆ ತಿಳಿಸಿದರು.

‘ಕಾರ್ಯಕ್ರಮದಲ್ಲಿ ಪ್ರಚಾರದ ಕೊರತೆ ಹಾಗೂ ಅಧಿಕಾರಿಯ ಬೇಜವಾಬ್ದಾರಿತನ ಎದ್ದು ಕಾಣುತ್ತಿದೆ’ ಎಂದು ಆರೋಪ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT