ಬೀಳಗಿ: ಕಟ್ಟಡ ಕಾರ್ಮಿಕರ ಮಕ್ಕಳ ಶಿಕ್ಷಣಕ್ಕಾಗಿ ರಾಜ್ಯ ಸರ್ಕಾರ 'ಶ್ರಮಿಕ ವಸತಿ ಶಾಲೆ' ನಿರ್ಮಾಣಕ್ಕೆ ಮುಂದಾಗಿದ್ದು, ಬೀಳಗಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸುನಗ ಎಲ್.ಟಿ.2ಯಲ್ಲಿ ಇದಕ್ಕಾಗಿ ಸ್ಥಳ ಗುರುತಿಸಲಾಗಿದೆ ಎಂದು ಶಾಸಕ ಜೆ.ಟಿ. ಪಾಟೀಲ ಹೇಳಿದರು.

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಸಹಯೋಗದಲ್ಲಿ ತಾಲ್ಲೂಕಿನ ಸುನಗ ಎಲ್.ಟಿ.2 ಗ್ರಾಮದಲ್ಲಿ ಗುರುವಾರ ಏರ್ಪಡಿಸಿದ್ದ ಶ್ರಮಿಕ ವಸತಿ ಶಾಲೆಯ ಭೂಮಿ ಪೂಜಾ ಸಮಾರಂಭ ನೇರವೆರಿಸಿ ಅವರು ಮಾತನಾಡಿದರು.

ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಾದರಿಯಲ್ಲಿ ‘ಶ್ರಮಿಕ ವಸತಿ ಶಾಲೆ’ ನಿರ್ಮಾಣಕ್ಕೆ ಯೋಜನೆ ರೂಪಿಸಿದೆ. ಇದಕ್ಕೆ ಅಂದಾಜು ₹35 ಕೋಟಿ ಅನುದಾನವನ್ನು ಮಂಡಳಿ ಮೀಸಲಿಟ್ಟಿದೆ. 6ನೇ ತರಗತಿಯಿಂದ ಪಿಯುಸಿವರೆಗೆ ಉಚಿತ ಶಿಕ್ಷಣ ದೊರೆಯಲಿದೆ. ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಾರ್ಮಿಕರ ಮಕ್ಕಳಿಗೆ ಮಾತ್ರ ಈ ಸೌಲಭ್ಯ ಸಿಗಲಿದೆ ಎಂದರು.

ಪ್ರತಿ ತರಗತಿಗೆ 50 ವಿದ್ಯಾರ್ಥಿಗಳಿಗೆ ಪ್ರವೇಶಾತಿ ಕಲ್ಪಿಸಲಾಗುತ್ತದೆ. ಪ್ರತಿ ವಸತಿ ಶಾಲೆಯಲ್ಲಿ ಅಂದಾಜು 300ರಿಂದ 350 ವಿದ್ಯಾರ್ಥಿಗಳು ವ್ಯಾಸಂಗ ಮಾಡಲಿದ್ದಾರೆ. ಇಷ್ಟು ವಿದ್ಯಾರ್ಥಿಗಳಿಗೆ ಅಗತ್ಯವಿರುವ ಶಾಲಾ ಕಟ್ಟಡ, ಹಾಸ್ಟೆಲ್ ನಿರ್ಮಾಣ ಮಾಡಲಾಗುತ್ತದೆ. ತರಗತಿ ಕೊಠಡಿ, ಪ್ರಯೋಗಾಲಯ, ಕ್ರೀಡಾಂಗಣ, ಗ್ರಂಥಾಲಯ, ಕಚೇರಿ, ಶಿಕ್ಷಕರಿಗೆ ಪ್ರತ್ಯೇಕ ವಸತಿ ಸಮುಚ್ಚಯ ಇರಲಿದೆ ಎಂದರು.

ಜಿಲ್ಲಾ ಕಾರ್ಮಿಕ ಅಧಿಕಾರಿ ರಮೇಶ ಸುಂಬಡ ಪ್ರಾಸ್ತಾವಿಕವಾಗಿ ಮಾತನಾಡಿದರು.

ಜಿ.ಪಂ ಕೆಡಿಪಿ ಸದಸ್ಯ ಜಿ.ಆರ್. ಪಾಟೀಲ, ಕಾರ್ಮಿಕ ಇಲಾಖೆ ಎಇಇ ಎಚ್.ಅರುಣಕುಮಾರ, ತಾಲ್ಲೂಕು ಕಾರ್ಮಿಕ ನಿರೀಕ್ಷಕ ರಾಜಶೇಖರ ಕುರಡಿಕರ, ಕಾರ್ಮಿಕ ಇಲಾಖೆ ಕಾರ್ಯನಿರ್ವಾಹಕ ರವಿ ನಾಗನಗೌಡರ, ಪ್ರವೀಣ ಹಿರೇಮಠ, ಚಂದ್ರಶೇಖರ ಪಂಢರಿ, ರವಿ ಲಿಂಗಣ್ಣವರ, ಹನಮಂತ ದಳವಾಯಿ, ಬಸು ಮೇಟಿ, ಭೀಮಶಿ ಎರಡೆಮ್ಮಿ, ನಾರಾಯಣ ಕಂಬಾರ, ಶಂಕರ ಡಬರಿ ಇದ್ದರು.

ಯುಕೆಪಿ ಯೋಜನೆ ಪೂರ್ಣ: ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಯುಕೆಪಿ ಸಂತ್ರಸ್ತರಿಗೆ ಕೇವಲ ಭಾಷಣದಲ್ಲಿ ಭರವಸೆ ನೀಡಿತ್ತು. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಎಷ್ಟೇ ಸಾಲವಾದರೂ ಪರವಾಗಿಲ್ಲ, ಯೋಜನೆಯನ್ನು ಪೂರ್ಣಗೊಳಿಸಲು ದಾಪುಗಾಲು ಇಟ್ಟಿದೆ. ಕೇಂದ್ರ ಸರ್ಕಾರ ಅನುಮತಿ ನೀಡದಿದ್ದರೂ 75,000 ಎಕರೆ ಭೂಸ್ವಾಧೀನ ಪ್ರಕ್ರಿಯೆ ನಡೆಸಿ ಯೋಜನೆಯನ್ನು ಪೂರ್ಣಗೊಳಿಸುವುದು ನಮ್ಮ ಸಂಕಲ್ಪ’ ಎಂದು ಶಾಸಕ ಜೆ.ಟಿ. ಪಾಟೀಲ ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-19-257583187

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.