ಬೀಳಗಿ: ‘ವಿಶ್ವಕರ್ಮ ಸಮಾಜವು ಭಾರತದ ಅತೀ ಪ್ರಾಚೀನ ಕುಶಲಕರ್ಮಿಗಳ ಸಮಾಜ. ಕಾಯಕ ತತ್ವದಲ್ಲಿ ನಂಬಿಕೆ ಇಟ್ಟ ಈ ಸಮಾಜವು ಶಿಲ್ಪಕಲೆ, ವಾಸ್ತುಶಿಲ್ಪ ಮತ್ತು ಲೋಹದ ಕಲೆಗಳಲ್ಲಿ ಅಪಾರ ಪರಿಣತಿ ಹೊಂದಿದೆ’ ಎಂದು ಕನೇರಿ ಮಠದ ಅದೃಶ್ಯ ಕಾಡ ಸಿದ್ದೇಶ್ವರ ಸ್ವಾಮೀಜಿ ಹೇಳಿದರು.

ಸ್ಥಳೀಯ ಕಾಳಿಕಾಕಮಠೇಶ್ವರ ದೇವಸ್ಥಾನದ ದಶಮಾನೋತ್ಸವ ಹಾಗೂ ಯುಗಾದಿ ಸಂಭ್ರಮ ಸಮಾರಂಭದ ಅಂಗವಾಗಿ ಈಚೆಗೆ ಏರ್ಪಡಿಸಿದ್ದ ಧಾರ್ಮಿಕ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿ, ‘ವಿಶ್ವಕರ್ಮ ಸಮಾಜವು ಕಲಾತ್ಮಕವಾಗಿ ದೇಶದ ಸಾಂಸ್ಕೃತಿಕ ಪರಂಪರೆಯನ್ನು ಎತ್ತಿ ಹಿಡಿಯುವಲ್ಲಿ ಮಹತ್ವದ ಪಾತ್ರ ವಹಿಸಿದೆ’ ಎಂದು ಹೇಳಿದರು.

ಕೆ.ಎಸ್.ರಾಜಣ್ಣ ಮಾತನಾಡಿ, ‘ಸಾಧನೆ ಮಾಡಲು ಅಂಗಾಂಗಗಳೇ ಮುಖ್ಯವಲ್ಲ, ವಿಕಲಚೇತನರ ಕುರಿತು ಅನುಕಂಪ ಬೇಡ, ಅವಕಾಶ ನೀಡಿ’ ಎಂದ ಅವರು, ವಿಶ್ವಕರ್ಮ ಸಮಾಜಕ್ಕೆ ಸಿಗಬೇಕಾದ ರಾಜಕೀಯ ಪ್ರಾತಿನಿಧ್ಯ ಸಿಗದೆ ಇರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು. ಅಂಗವಿಕಲ ವ್ಯಕ್ತಿಗಳ ಅಧಿನಿಯಮಕ್ಕೆ ಅಂಗವಿಕಲರನ್ನೇ ಆಯ್ಕೆಮಾಡಲು ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.

ಹಂಪಿ ವಿಶ್ವವಿದ್ಯಾಲಯದ ಹಸ್ತ ಪ್ರತಿ ವಿಭಾಗದ ವಿರೇಶ ಬಡಿಗೇರ ಪ್ರಾಸ್ತಾವಿಕವಾಗಿ ಮಾತನಾಡಿ, ‘ವಿಶ್ವಕರ್ಮ ಸಮಾಜದವರು ಜಾಗೃತರಾಗಿ ಸಮಾಜವನ್ನು ಸದೃಢವಾಗಿ ನಿರ್ಮಿಸಬೇಕು. ಪ್ರಸ್ತುತ ಭಾರತೀಯ ಸಂಸ್ಕೃತಿ ಉಳಿಯಬೇಕಾದರೆ ನಮ್ಮ ವಿಶ್ವಕರ್ಮ ಸಮಾಜ ಕಾರಣ’ ಎಂದು ತಿಳಿಸಿದರು.

ತಾಲ್ಲೂಕು ವಿಶ್ವಕರ್ಮ ಸಮಾಜ ವಿಕಾಸ ಸಂಸ್ಥೆಯ ಅಧ್ಯಕ್ಷ ನಾಗರಾಜ ಟಂಕಸಾಲಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವಿಜಯಪುರದ ಗಣ ವ್ಯಾಪಾರಸ್ಥ ಈರಣ್ಣ ಪತ್ತಾರ ಇದ್ದರು.

ಕೆ.ಪಿ. ವಿಶ್ವಕರ್ಮ ಅವರಿಗೆ ಕಾಳಿ ಪುತ್ರ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕೃಷಿಕ, ಸೈನಿಕ, ಪೌರಕಾರ್ಮಿಕ, ಶಿಕ್ಷಕ, ಶಿಲ್ಪಿ ಹಾಗೂ ವಿವಿಧ ಕ್ಷೇತ್ರಗಳ ಸಾಧಕರನ್ನು ಇದೇ ಸಂದರ್ಭದಲ್ಲಿ ಗೌರವಿಸಲಾಯಿತು. ಸಂಜೆ 6 ಗಂಟೆಗೆ ಬ್ರಹ್ಮ ರಥೋತ್ಸವ ನಂತರ ಲಕ್ಷ ದೀಪೋತ್ಸವ ಸಮಾರಂಭ ನೆರವೇರಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260327-19-1083106500

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.