ಬಾಗಲಕೋಟೆ: ಗ್ರಾಮ ಪಂಚಾಯ್ತಿ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಸಂಘಟನೆ ಬಲಪಡಿಸಲು ನವೆಂಬರ್ 28ರಂದು ಮುಧೋಳ ಹಾಗೂ ಬೀಳಗಿಯಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಶಾಂತಗೌಡ ಪಾಟೀಲ ತಿಳಿಸಿದರು.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಶೇ 80ರಷ್ಟು ಸ್ಥಾನಗಳಲ್ಲಿ ಗೆಲುವು ಸಾಧಿಸುವ ನಿಟ್ಟಿನಲ್ಲಿ ಕಾರ್ಯತಂತ್ರ ರೂಪಿಸಲಾಗಿದೆ. ಮೊದಲ ಹಂತದಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ, ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆ ಸೇರಿದಂತೆ ಪಂಚಸೂತ್ರಗಳನ್ನು ಅನುಸರಿಸಲಾಗುತ್ತಿದೆ ಎಂದರು.

ಭಾನುವಾರ ಬೆಳಿಗ್ಗೆ 11 ಗಂಟೆಗೆ ಮುಧೋಳದಲ್ಲಿ ಹಾಗೂ ಮಧ್ಯಾಹ್ನ 3 ಗಂಟೆಗೆ ಬೀಳಗಿಯಲ್ಲಿ ಸಮಾವೇಶ ನಡೆಯಲಿದೆ. ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ ಕಟೀಲ್, ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಲಕ್ಷ್ಮಣ ಸವದಿ, ಸಂಸದರಾದ ಪಿ.ಸಿ.ಗದ್ದಿಗೌಡರ, ರಮೇಶ ಜಿಗಜಿಣಗಿ, ಜಿಲ್ಲೆಯ ಶಾಸಕರು, ಶಕ್ತಿ ಕೇಂದ್ರದ ಪ್ರಮುಖರು ಭಾಗವಹಿಸಲಿದ್ದಾರೆ.

ಮುಧೋಳ, ತೇರದಾಳ ಹಾಗೂ ಜಮಖಂಡಿ ಕ್ಷೇತ್ರದ ಪ್ರಮುಖರು ಮುಧೋಳದ ಕಾರ್ಯಕ್ರಮದಲ್ಲಿ, ಬಾಗಲಕೋಟೆ, ಬಾದಾಮಿ, ಹುನಗುಂದ, ಬೀಳಗಿ ಮತ ಕ್ಷೇತ್ರದ ನಾಯಕರು ಬೀಳಗಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ನಾಯ್ಕರ, ವೆಂಕಟೇಶ ಪ್ರಸಾದ ಮಾಲಿಪಾಟೀಲ, ಎಸ್.ಸತೀಶ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.