ಬಾಗಲಕೋಟೆ: ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ತರಲು ಮುಂದಾಗಿರುವ ದ್ವೇಷ ಭಾಷಣ ಪ್ರತಿಬಂಧಕ ಕಾಯ್ದೆಯನ್ನು ವಿರೋಧಿಸಿ ಹಾಗೂ ಬಾಂಗ್ಲಾ ದೇಶದಲ್ಲಿ ನಡೆಯುತ್ತಿರುವ ಹಿಂದೂಗಳ ಹತ್ಯೆ ಖಂಡಿಸಿ ನಗರದಲ್ಲಿ ಬಿಜೆಪಿ ಸೋಮವಾರ ಪ್ರತಿಭಟನೆ ನಡೆಸಿತು.

ಬಸವೇಶ್ವರ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಮಾಜಿ ಶಾಸಕ ವೀರಣ್ಣ ಚರಂತಿಮಠ, ಸಂವಿಧಾನ ನೀಡಿರುವ ವಾಕ್ ಸ್ವಾತಂತ್ರ್ಯವನ್ನು ಕಿತ್ತುಕೊಳ್ಳುವ ಕೆಲಸಕ್ಕೆ ಕಾಂಗ್ರೆಸ್ ಮುಂದಾಗಿದೆ. ಸಮಾಜದಲ್ಲಿ ಆಗುವ ಅನಾಹುತಗಳ ಬಗ್ಗೆ ಮಾತನಾಡುವ ಹಕ್ಕನ್ನು ಸಹ ಕಿತ್ತುಕೊಳ್ಳುವ ಹುನ್ನಾರವೂ ಇದರಲ್ಲಿ ಅಡಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಾಗಲಕೋಟೆಯಲ್ಲಿ ಮಾದಕ ವಸ್ತುಗಳ ಜಾಲ ವ್ಯಾಪಕವಾಗಿದ್ದು ಇದರ ಬಗ್ಗೆ ಪೋಲೀಸರು ನಿಗಾ ವಹಿಸಿಬೇಕು ಎಂದು ಮಾಜಿ ಶಾಸಕರು ಹೇಳಿದರು. ಪ್ರತಿಭಟನೆಯಲ್ಲಿ ಮುಖಂಡರಾದ ಡಾ.ಎಂ.ಎಸ್.ದಡ್ಡೆನ್ನವರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ನಾಯ್ಕರ, ಬಸವರಾಜ ಯಂಕಂಚಿ, ಗ್ರಾಮೀಣ ಮಂಡಲ ಅಧ್ಯಕ್ಷ ಸುರೇಶ ಕೊಣ್ಣೂರು, ನಗರ ಮಂಡಲ ಅಧ್ಯಕ್ಷ ಬಸವರಾಜ ಹುನಗುಂದ, ಮುತ್ತಣ್ಣ ಬೆಣ್ಣೂರ, ಶಿವಾನಂದ ಟವಳಿ, ರಾಜು ಮುದೇನೂರ, ಮಲ್ಲೇಶ ವಿಜಾಪುರ, ಕಲ್ಲಪ್ಪ ಭಗವತಿ, ಸತ್ಯನಾರಾಯಣ ಹೇಮಾದ್ರಿ, ಜ್ಯೋತಿ ಭಜಂತ್ರಿ, ಶಶಿಕಲಾ ಮಜ್ಜಗಿ, ಸುನಂದಾ ಹಿರೇಮಠ, ಸ್ಮಿತಾ ಪವಾರ, ಸುಜಾತಾ ಶಿಂಧೆ ಮತ್ತಿತರರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.