ಬಾದಾಮಿ: ರಾಜ್ಯ ಸರ್ಕಾರವು ಜನೌಷಧ ಕೇಂದ್ರಗಳನ್ನು ಮುಚ್ಚಲು ಹೊರಟಿರುವುದನ್ನು ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ತಾಲ್ಲೂಕು ಬಿಜೆಪಿ ಮಂಡಲದಿಂದ ಪ್ರತಿಭಟನೆ ನಡೆಸಲಾಯಿತು.

ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಇಲ್ಲಿನ ಸರ್ಕಾರಿ ಆಸ್ಪತ್ರೆಯ ಎದುರು ಮೌನ ಪ್ರತಿಭಟನೆ ನಡೆಸಿದರು.

ಬಾಗಲಕೋಟೆ ಜಿಲ್ಲಾ ಘಟಕದ ಬಿಜೆಪಿ ಅಧ್ಯಕ್ಷ ಶಾಂತಗೌಡ ಪಾಟೀಲ ಮಾತನಾಡಿ, ‘ರಾಜ್ಯ ಸರ್ಕಾರದಿಂದ ಜನವಿರೋಧಿ ನೀತಿ ಇದೇ ರೀತಿ ಮುಂದುವರಿದರೆ ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.

ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಶಿವನಗೌಡ ಸುಂಕದ, ತಾಲ್ಲೂಕು ಮಂಡಲ ಅಧ್ಯಕ್ಷ ನಾಗರಾಜ ಕಾಚಟ್ಟಿ, ಮುತ್ತು ಉಳ್ಳಾಗಡ್ಡಿ, ಹುಚ್ಚಪ್ಪ ಬೆಳ್ಳಿಗುಂಡಿ, ಭೀಮನಗೌಡ ಪಾಟೀಲ, ಹೊನ್ನಯ್ಯ ಹಿರೇಮಠ, ಬೇಲೂರಪ್ಪ ವಡ್ಡರ, ಸವಿತಾ ಜಾನಕಿ, ರೆಹಮಾನ ಕೆರಕಲಮಟ್ಟಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.