ಭಾನುವಾರ, ನವೆಂಬರ್ 1, 2020
19 °C
ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ತೀರ್ಮಾನ

ಬಿಡಿಸಿಸಿ ಬ್ಯಾಂಕ್ ಚುನಾವಣೆ: ಬಿಜೆಪಿಯ ನಾಲ್ವರ ಹೆಸರು ಅಂತಿಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಾಗಲಕೋಟೆ: ಇಲ್ಲಿನ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕ ಮಂಡಳಿ ಚುನಾವಣೆಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನಾಗಿ ನಾಲ್ವರ ಹೆಸರನ್ನು ಇತ್ತೀಚಿಗೆ ಬಾದಾಮಿಯಲ್ಲಿ ನಡೆದ ಜಿಲ್ಲಾ ಕೋರ್ ಕಮಿಟಿ ಸಭೆಯಲ್ಲಿ ಅಂತಿಮಗೊಳಿಸಲಾಯಿತು ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಟಿ.ಪಾಟೀಲ ತಿಳಿಸಿದ್ದಾರೆ.

ನೇಕಾರ ಸಹಕಾರಿ ಸಂಘದಿಂದ ಮಲ್ಲಿಕಾರ್ಜುನ ಬಣಕಾರ, ಕುರಿ ಹಾಗೂ ಉಣ್ಣೆ ಸಹಕಾರಿ ಸಂಘದಿಂದ ಸದಾಶಿವ ಇಟಕನ್ನವರ, ಇತರೆ ಸಹಕಾರಿ ಸಂಘದಿಂದ ಹನಮಂತ ನಿರಾಣಿ, ಪತ್ತಿನ ಸಹಕಾರಿ ಸಂಘ ಹಾಗೂ ಬ್ಯಾಂಕ್‌ಗಳಿಂದ ಪ್ರಕಾಶ ತಪಶೆಟ್ಟಿ ಅವರನ್ನು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನಾಗಿ ಘೋಷಣೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು