ಬಾಗಲಕೋಟೆ: ಮಹಾರಾಷ್ಟ್ರದಲ್ಲಿ ಕರ್ನಾಟಕದ ಬಸ್ಸುಗಳಿಗೆ ಕಪ್ಪು ಬಣ್ಣ ಬಳಿದಿರುವ ಘಟನೆಗೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸರ್ಕಾರದ ಜತೆ ರಾಜ್ಯದ ಮುಖ್ಯ ಕಾರ್ಯದರ್ಶಿ ಮಾತುಕತೆ ನಡೆಸಲಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವಶ್ಯಕತೆ ಬಿದ್ದರೆ ಮಹಾರಾಷ್ಟ್ರ ಸರ್ಕಾರದೊಂದಿಗೆ ಮಾತನಾಡುವೆ ಎಂದರು.

ನಮ್ಮ ಬಸ್ಸಿಗೆ ಅವರು ಮಸಿ ಬಳಿಯುವುದು, ಅವರ ಬಸ್ಸಿಗೆ ನಾವು ಮಸಿ ಬಳಿಯುವುದರಲ್ಲಿ ಅರ್ಥವಿಲ್ಲ ಎಂದರು.

ಮಹಾರಾಷ್ಟ್ರದವರು ಇಲ್ಲಿ ಬರಬೇಕು, ನಮ್ಮವರು ಅಲ್ಲಿಗೆ ಹೋಗಬೇಕು. ಮಹಾರಾಷ್ಟ್ರ ಸರ್ಕಾರ, ತಪ್ಪು ಮಾಡಿದವರನ್ನು ಬೆಂಬಲಿಸಬಾರದು. ಅವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಹೇಳಿದರು.

ಮಹಾರಾಷ್ಟ್ರಕ್ಕೆ ಹೋಗುವ ಬಸ್ಸುಗಳನ್ನು ಸ್ಥಗಿತಗೊಳಿಸಲಾಗಿದೆ. ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುವ ಬಸ್ಗಳ ಸಂಚಾರವೂ ಸ್ಥಗಿತಗೊಂಡಿದೆ ಎಂದರು.

ಇಳಕಲ್ ಡಿಪೊ ಬಸ್ಸಿಗೆ ಕಪ್ಪು ಬಣ್ಣ

ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ಜಿಲ್ಲೆಯ ಇಳಕಲ್ ಡಿಪೊ ಬಸ್ಸಿಗೆ ಕಪ್ಪು ಬಣ್ಣ ಬಳಿಯಲಾಗಿದೆ ಎಂದು ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆ ವಿಭಾಗೀಯ ನಿಯಂತ್ರಕ ನಿತಿನ್ ಹೆಗಡೆ ತಿಳಿಸಿದ್ದಾರೆ.

ಬಸ್ಸಿಗೆ ಮಸಿ ಬಳಿದು, ಜೈ ಮಹಾರಾಷ್ಟ್ರ ಎಂದು ಬರೆಯಲಾಗಿದೆ. ಚಾಲಕನನ್ನೂ ಕೆಳಗಿಳಿಸಿ ಕೆಂಪು ಬಣ್ಣ ಬಳಿದು, ಅವರಿಂದ ಜೈ ಮಹಾರಾಷ್ಟ್ರ ಎಂದು ಹೇಳಿಸಲಾಗಿದೆ ಎಂದರು.

ಸೊಲ್ಲಾಪುರ, ಕೊಲ್ಹಾಪುರಕ್ಕೆ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ಮೀರಜ್ ಮಾತ್ರ ಬಸ್ ತೆರಳುತ್ತಿವೆ ಎಂದು ತಿಳಿಸಿದ್ದಾರೆ.
.ಬೆಳಗಾವಿ | ಬಿಗಿ ಕ್ರಮ ಕೈಗೊಂಡು ಬಸ್ ಓಡಿಸಲಿ: ಗೋವಿಂದ ಕಾರಜೋಳ.ಕರ್ನಾಟಕ ಸ್ಪಷ್ಟ ನಿಲುವು ತಳೆಯುವವರೆಗೂ ಮಹಾರಾಷ್ಟ್ರದಿಂದ ಬಸ್ ಸಂಚಾರ ಇಲ್ಲ: ಸಚಿವ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.