ಹುನಗುಂದ: ನಗರದ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ವಿದ್ಯಾರ್ಥಿಗಳಿಗೆ ಬಸ್‌ಪಾಸ್ ವಿತರಿಸುವ ಕಾರ್ಯಕ್ರಮ ಜರುಗಿತು.
ನಗರದ ಪದವಿ ಕಾಲೇಜುಗಳ ವಿದ್ಯಾರ್ಥಿಗಳ ಬಸ್‌ಪಾಸ್ ಅವಧಿ ಮುಕ್ತಾಯವಾಗಿದ್ದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗಿತ್ತು. ವಿದ್ಯಾರ್ಥಿನಿಯರು ಶಕ್ತಿ ಯೋಜನೆಯಡಿ ಆಧಾರ್ ಕಾರ್ಡ್ ತೋರಿಸಿ, ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು. ಆದರೆ, ದೂರದ ಊರಿನ ವಿದ್ಯಾರ್ಥಿಗಳು ಕಾಲೇಜಿಗೆ ಬಸ್‌ನಲ್ಲಿ ಬರಲಾಗದೆ, ಕಿರು ಪರೀಕ್ಷೆಯನ್ನೂ ನಡೆಸಲು ತೊಡಕಾಗಿತ್ತು.
ಈ ವಿಷಯವನ್ನು ಕಾಲೇಜಿನ ಪ್ರಾಚಾರ್ಯರು ಶಾಸಕ ವಿಜಯಾನಂದ ಕಾಶಪ್ಪನವರಗೆ ತಿಳಿಸಿದ್ದರು. ವಿದ್ಯಾರ್ಥಿಗಳಿಗೆ ಆಗುತ್ತಿರುವ ತೊಂದರೆ ಬಗ್ಗೆ ಮುಖ್ಯಮಂತ್ರಿ ಅವರೊಂದಿಗೆ ಮಾತನಾಡಿ, ವಿದ್ಯಾರ್ಥಿಗಳ ಬಸ್‌ಪಾಸ್ ಅವಧಿಯನ್ನು ಎರಡು ತಿಂಗಳವರೆಗೆ ಮುಂದುವರಿಸಲು ಮನವಿ ಮಾಡಿದ್ದರು. ಅದರಂತೆ ಬಸ್‌ಪಾಸ್ ಅವಧಿ ವಿಸ್ತರಿಸಿ, ವಿದ್ಯಾರ್ಥಿಗಳಿಗೆ ವಿತರಿಸಲಾಯಿತು ಎಂದು ಸಾರಿಗೆ ಸಂಸ್ಥೆ ಅಧಿಕಾರಿಗಳು ತಿಳಿಸಿದರು.
ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕಿ ಗಾಯತ್ರಿ ದಾದ್ಮಿ, ಡಾ.ಎಂ.ಬಿ. ಒಂಟಿ, ಸಾರಿಗೆ ಸಂಸ್ಥೆ ಸಿಬ್ಬಂದಿ ಅರಳಿ, ಪತ್ತಾರ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.