ಗುರುವಾರ , ಅಕ್ಟೋಬರ್ 22, 2020
24 °C
ಡಿ.ಕೆ.ಶಿವಕುಮಾರ್ ಪರ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರತಿಭಟನೆ

‘ಸಿಬಿಐ ದಾಳಿ ರಾಜಕೀಯ ಪ್ರೇರಿತ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಾಗಲಕೋಟೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಿವಾಸದ ಮೇಲೆ ಸಿಬಿಐ ದಾಳಿ ನಡೆಸಿರುವುದನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ಡಿ.ಕೆ. ಶಿವಕುಮಾರ್ ಅವರ ವರ್ಚಸ್ಸು ಕುಂದಿಸಲು ಬಿಜೆಪಿ ಸರ್ಕಾರ ಇಂತಹ ಕೀಳು ಮಟ್ಟದ ರಾಜಕೀಯ ಮಾಡುತ್ತಿದೆ. ಇದರ ಫಲವನ್ನು ಮುಂದಿನ ದಿನಗಳಲ್ಲಿ ಬಿಜೆಪಿ ನಾಯಕರು ಅನುಭವಿಸಲಿದ್ದಾರೆ. ಉಪಚುನಾವಣೆಯಲ್ಲಿ ಸೋಲಿನ ಭಯದಿಂದ ಬಿಜೆಪಿ ಸರ್ಕಾರ ಸಿಬಿಐ ದಾಳಿ ನಡೆಸಿ ಡಿ.ಕೆ. ಶಿವಕುಮಾರ್ ಅವರ ಆತ್ಮಬಲ ಕುಗ್ಗಿಸುವ ಕೆಲಸ ಮಾಡುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. 

ಬಿಜೆಪಿ ಹೇಡಿಯಂತೆ ಸಿಬಿಐ ದಾಳಿ ಮಾಡಿಸುವುದನ್ನು ಬಿಟ್ಟು ಚುನಾವಣೆಯ ಎದುರಿಸುವ ತಾಕತ್ತು ತೋರಿಸಲಿ .
ಪಕ್ಷದ ಎಲ್ಲ ನಾಯಕರು, ಕಾರ್ಯಕರ್ತರು ಅವರ ಜೊತೆಗಿದ್ದೇವೆ. ನೈತಿಕ ಸ್ಥೈರ್ಯ ತುಂಬುವ ಕೆಲಸ ಮಾಡುತ್ತೇವೆ. ಶೀಘ್ರ ಅವರು ಈ ಸಂಕಷ್ಟದಿಂದ ಹೊರಬಂದು ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿ ಕೊಡುತ್ತಾರೆ ಎಂದು ಜಿಲ್ಲಾ ಘಟಕದ 
ಮಾಧ್ಯಮ ವಕ್ತಾರ ನಾಗರಾಜ ಹದ್ಲಿ ಹೇಳಿದರು.

ಪಕ್ಷದ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಮಂಜುನಾಥ ವಾಸನದ, ಮುಖಂಡರಾದ ಉಮೇಶ ಮೇಟಿ, ನಿಂಗನಗೌಡ ಪಾಟೀಲ, ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷ ರಾಜು ಮನ್ನಿಕೇರಿ, ಬ್ಲಾಕ್‌ ಕಾಂಗ್ರೆಸ್ ಅಧ್ಯಕ್ಷ ಹಾಜಿಸಾಬ್ ದಂಡಿನ, ಮಹಿಳಾ ಘಟಕದ ಅಧ್ಯಕ್ಷೆ ರೇಣುಕಾ ನ್ಯಾಮಗೌಡ, ದ್ರಾಕ್ಷಾಯಿಣಿ ಗುಗ್ಯಾಳ, ಹನಮಂತ ರಾಕುಂಪಿ, ಮುತ್ತು ಜೋಳದ, ತಿಪ್ಪಣ್ಣ ನೀಲನಾಯಕ, ಆನಂದ ಶಿಲ್ಪಿ, ಬಳ್ಳಾರಿ ಗೋವಿಂದ ಮತ್ತಿತರರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು