ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲೆಗೆ ಸೆ.6ರಂದು ಕೇಂದ್ರ ತಂಡ ಭೇಟಿ

ಅತಿವೃಷ್ಟಿ, ಪ್ರವಾಹದಿಂದ ಹಾನಿಯ ಪ್ರಮಾಣ ಅಧ್ಯಯನ
Last Updated 3 ಸೆಪ್ಟೆಂಬರ್ 2021, 11:05 IST
ಅಕ್ಷರ ಗಾತ್ರ

ಬಾಗಲಕೋಟೆ: ‘ಜಿಲ್ಲೆಯಲ್ಲಿ ಅತಿವೃಷ್ಟಿಮತ್ತು ಪ್ರವಾಹದಿಂದ ಉಂಟಾದ ಹಾನಿ ಪರಿಶೀಲನೆಗೆ ಸೆಪ್ಟೆಂಬರ್ 5 ರಂದು ಕೇಂದ್ರದಅಂತರ ಸಚಿವಾಲಯ ಅಧ್ಯಯನ ತಂಡ ಬರಲಿದೆ’ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದರು.

ನಗರದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಅವರು, ‘ಜಲಶಕ್ತಿ ಸಚಿವಾಲಯದ ಸೂಪರಿಂಟೆಂಡಿಂಗ್ ಎಂಜಿನಿಯರ್‌ ಗುರುಪ್ರಸಾದ್ ನೇತೃತ್ವ ವಹಿಸಲಿದ್ದಾರೆ. ಕೇಂದ್ರ ಹಣಕಾಸು ಸಚಿವಾಲಯದ ಉಪ ಕಾರ್ಯದರ್ಶಿ ಮಹೇಶ ಕುಮಾರ ಹಾಗೂ ರಾಜ್ಯ ಕಂದಾಯ ವಿಭಾಗದ ಕನ್ಸಲ್ಟೆಂಟ್ ಶ್ರೀನಿವಾರ ರೆಡ್ಡಿ ಇರಲಿದ್ದಾರೆ’ ಎಂದು ತಿಳಿಸಿದರು.

‘ಸೆಪ್ಟೆಂಬರ್ 6ರಂದು ಬೆಳಿಗ್ಗೆ 9ರಿಂದ ಸಂಜೆ 6ರವರೆಗೆ ಜಮಖಂಡಿ ಉಪವಿಭಾಗ ವ್ಯಾಪ್ತಿಯಲ್ಲಿ ಪ್ರವಾಹದಿಂದ ಹಾನಿಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ’ ಎಂದರು.

ಪ್ರವಾಹದಿಂದ ಹಾನಿಗೀಡಾದ ರಸ್ತೆ, ಸೇತುವೆ, ಮನೆ, ಶಾಲೆ, ಅಂಗನವಾಡಿ ಕೇಂದ್ರ, ಕೃಷಿ ಮತ್ತು ತೋಟಗಾರಿಕೆ ಬೆಳೆಗಳನ್ನು ವೀಕ್ಷಿಸಿ ಮಾಹಿತಿ ಪಡೆಯಲಿದ್ದಾರೆ. ಹೀಗಾಗಿ ಹಾನಿಯ ವರದಿ ಸಿದ್ಧಪಡಿಸಿಟ್ಟುಕೊಳ್ಳುವಂತೆ ವಿವಿಧ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಜಿಲ್ಲಾ ಪಂಚಾಯ್ತಿ ಸಿಇಒ ಟಿ.ಭೂಬಾಲನ್, ಹೆಚ್ಚುವರಿ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಜಿಲ್ಲಾ ಪಂಚಾಯ್ತಿ ಉಪಕಾರ್ಯದರ್ಶಿ ಅಮರೇಶ ನಾಯಕ, ಉಪವಿಭಾಗಾಧಿಕಾರಿಗಳಾದ ಎಂ.ಗಂಗಪ್ಪ, ಸಿದ್ದು ಹುಲ್ಲೋಳ್ಳಿ, ಜಂಟಿ ಕೃಷಿ ನಿರ್ದೇಶಕಿ ಡಾ.ಚೇತನಾ ಪಾಟೀಲ, ತೋಟಗಾರಿಕೆ ಉಪನಿರ್ದೇಶಕ ರಾಹುಲ್‌ಕುಮಾರ ಬಾವಿದಡ್ಡಿ, ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಶಾಂತ, ಡಿಎಚ್‌ಒ ಡಾ.ಎ.ಎನ್.ದೇಸಾಯಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT