ಸಾರ್ವಜನಿಕರ ಕುಂದು–ಕೊರತೆ ಆಲಿಕೆ; ಇನ್ನು ಸಾಮಾಜಿಕ ಜಾಲತಾಣದಲ್ಲೂ ಲಭ್ಯ

7
ಸಿಇಒ ಜನ ಸ್ನೇಹಿ ಕಾರ್ಯ

ಸಾರ್ವಜನಿಕರ ಕುಂದು–ಕೊರತೆ ಆಲಿಕೆ; ಇನ್ನು ಸಾಮಾಜಿಕ ಜಾಲತಾಣದಲ್ಲೂ ಲಭ್ಯ

Published:
Updated:

ಬಾಗಲಕೋಟೆ: ’ಇಲ್ಲಿನ ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯ ಎಲ್ಲ ಇಲಾಖೆಗಳಿಗೆ ಸಂಬಂಧಿಸಿದ ದೂರು–ದುಮ್ಮಾನಗಳನ್ನು ಸಾರ್ವಜನಿಕರು ಇನ್ನು ಮುಂದೆ ಸಾಮಾಜಿಕ ಜಾಲತಾಣದಲ್ಲೂ ಸಲ್ಲಿಸಬಹುದು’ ಎಂದು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದ್ದಾರೆ.

ಜಿಲ್ಲಾ ಪಂಚಾಯ್ತಿಗೆ ಸಂಬಂಧಿಸಿದ ಫೇಸ್‌ಬುಕ್ (facebook.com/ceozp.bagalkot.39), ಟ್ವಿಟರ್ (mobile.twitter.com/CeozpB), ಇ–ಮೇಲ್ (zpbagalkot@gmail.com), ವಾಟ್ಸ್‌ಆ್ಯಪ್ (9480851000) ನಂತಹ ಸಾಮಾಜಿಕ ಜಾಲತಾಣಗಳ ಮೂಲಕ ದೂರುಗಳನ್ನು ಸಲ್ಲಿಸಬಹುದಾಗಿದೆ.

ಜಿಲ್ಲೆಯ ವಿದ್ಯಾರ್ಥಿನಿಲಯಗಳಲ್ಲಿನ ವಿದ್ಯಾರ್ಥಿಗಳು ಕುಂದು ಕೊರತೆಗಳಿದ್ದರೂ ಗಮನಕ್ಕೆ ತರಬಹುದಾಗಿದೆ ಎಂದು ಸಿಇಒ ಹೇಳಿದ್ದಾರೆ. ಜೊತೆಗೆ ಅನಕ್ಷರಸ್ಥರೂ ಸಹ  ಕುಂದು ಕೊರತೆ ಹಾಗೂ ದೂರುಗಳನ್ನು ಸಲ್ಲಿಸಿದಲ್ಲಿ ಅದನ್ನು ಆಲಿಸಿ ದಾಖಲಿಸಿಕೊಳ್ಳಲು ಸಿಇಒ ತಮ್ಮ ಕಚೇರಿಯಲ್ಲಿ ವಿಶೇಷ ಸಿಬ್ಬಂದಿಯನ್ನು ನೇಮಿಸಿದ್ದಾರೆ.

ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಖಾತೆ ತೆರೆದು ದೂರುಗಳನ್ನು ಸ್ವೀಕರಿಸುವಂತೆ ಸೂಚನೆ ನೀಡಿದ್ದಾರೆ. ಸರ್ಕಾರದ ಯೋಜನೆಗಳು ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪುತ್ತಿಲ್ಲ ಎಂಬ ದೂರುಗಳ ಹಿನ್ನೆಲೆಯಲ್ಲಿ ಸಿಇಒ ಈ ಕ್ರಮಕ್ಕೆ ಮುಂದಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. 

 

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !