ಹುನಗುಂದ: ‘ಪತ್ರಕರ್ತರು ಜಾಗೃತರಾಗಿದ್ದಾಗ ಮಾತ್ರ ಸಮಾಜ ಜಾಗೃತವಾಗಿರುತ್ತದೆ’ ಎಂದು ಇಳಕಲ್ಲದ ಗುರುಮಹಾಂತ ಸ್ವಾಮೀಜಿ ಹೇಳಿದರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಘಟಕದ ವತಿಯಿಂದ ಶುಕ್ರವಾರ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದರು.

‘ವರದಿಗಾರರು ಸತ್ಯಾಸತ್ಯತೆ ಪರಿಶೀಲಿಸಿ ವರದಿ ಮಾಡಿದಾಗ ಪತ್ರಿಕೆ ತನ್ನ ವಿಶ್ವಾಸಾರ್ಹತೆ ಉಳಿಸಿಕೊಳ್ಳುತ್ತದೆ. ಆಡಳಿತದಲ್ಲಿನ ಲೋಪ ದೋಷಗಳನ್ನು ಸರಿಪಡಿಸುವ ಅದ್ಭುತ ಶಕ್ತಿ ಪತ್ರಿಕೆಗಳಿಗಿದೆ. ವಿದ್ಯಾರ್ಥಿಗಳಲ್ಲಿ ಪತ್ರಿಕೆಗಳ ಬಗ್ಗೆ ಅರಿವು, ಪ್ರಜ್ಞೆ ಇರಬೇಕು’ ಎಂದರು

ಶಾಸಕ ವಿಜಯಾನಂದ ಕಾಶಪ್ಪನವರ ಮಾತನಾಡಿ, ‘ಪತ್ರಿಕೆಗಳು ಕೇವಲ ಜಾಹೀರಾತಿಗಾಗಿ ಹುಟ್ಟಿಕೊಳ್ಳಬಾರದು. ದಮನಿತರು ಹಾಗೂ ಶೋಷಿತರ ಪರ ಧ್ವನಿಯಾಗಿರಬೇಕು. ಪತ್ರಿಕೆಗಳು ಸ್ವಾಸ್ಥ ಸಮಾಜ ನಿರ್ಮಾಣ ಮಾಡುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಪತ್ರಿಕೆಗಳು ಸಹಕಾರಿಯಾಗಿವೆ. ಹುನಗುಂದ ಮತ್ತು ಇಳಕಲ್ ಪತ್ರಿಕಾ ಭವನ ನಿರ್ಮಾಣಕ್ಕೆ ಕ್ಷೇತ್ರದ ಶಾಸಕರ ನಿಧಿಯಿಂದ ತಲಾ ₹ 5 ಲಕ್ಷ ನೀಡಲಾಗುವುದು’ ಎಂದು ಭರವಸೆ ನೀಡಿದರು.

ಪಟ್ಟಣದ ಗಚ್ಚಿನಮಠದ ಅಮರೇಶ್ವರ ದೇವರು, ಕಾನಿಪದ ಜಿಲ್ಲಾ ಘಟಕದ ಅಧ್ಯಕ್ಷ ಆನಂದ ದಲಭಂಜನ, ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಅಮರೇಶ ನಾಗೂರ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ವಿಜಯ ಮಹಾಂತೇಶ ಗದ್ದನಕೇರಿ ಮಾತನಾಡಿದರು.

ಪುರಸಭೆ ಅಧ್ಯಕ್ಷೆ ಭಾಗ್ಯಶ್ರೀ ರೇವಡಿ, ಉಪಾಧ್ಯಕ್ಷೆ ರಾಜಮ್ಮ ಬದಾಮಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಸಿಕಂದರ್ ಧನ್ನೂರ, ಇಳಕಲ್ ಕಾನಿಪ ಅಧ್ಯಕ್ಷ ವಿನೋದ ಬಾರಿಗಿಡದ, ಸರ್ಕಾರಿ ನೌಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಸಂಗಮೇಶ ಪಾಟೀಲ ಇತರರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.