ಶುಕ್ರವಾರ, ಮೇ 29, 2020
27 °C

ಸಿಎಂ ಪರಿಹಾರ ನಿಧಿ: ಬಿ.ವಿ.ವಿ ಸಂಘದಿಂದ ₹2 ಕೋಟಿ ದೇಣಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಾಗಲಕೋಟೆ: ಕೊರೋನಾ ವೈರಸ್ ಹರಡುವಿಕೆ ವಿರುದ್ಧದ ಹೋರಾಟಕ್ಕೆ ಕೈಜೋಡಿಸಲು ಇಲ್ಲಿನ ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘ (ಬಿ.ವಿ.ವಿ ಸಂಘ) ಮುಖ್ಯಮಂತ್ರಿ ಪರಿಹಾರ ನಿಧಿಗೆ ₹2 ಕೋಟಿ ದೇಣಿಗೆ ನೀಡಿದೆ. ಸಂಘದ ಕಾರ್ಯಾಧ್ಯಕ್ಷರೂ ಆದ ಶಾಸಕ ವೀರಣ್ಣ ಚರಂತಿಮಠ ವೈಯಕ್ತಿಕವಾಗಿ ₹5 ಲಕ್ಷ ನೀಡಿದ್ದಾರೆ.

ಶೀಘ್ರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ₹2.05 ಕೋಟಿ ಮೊತ್ತದ ಚೆಕ್ ನೀಡುವುದಾಗಿ ವೀರಣ್ಣ ಚರಂತಿಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

₹50 ಲಕ್ಷ ದೇಣಿಗೆ: ಬಾಗಲಕೋಟೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಡಿ.ಸಿ.ಸಿ) ಕೂಡ ಮುಖ್ಯಮಂತ್ರಿ ಪರಿಹಾರ ನಿಧಿಗೆ ₹50 ಲಕ್ಷ ನೀಡುವುದಾಗಿ ತಿಳಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು