ಗುರುವಾರ , ಆಗಸ್ಟ್ 18, 2022
24 °C
9 ಜನರ ಬಂಧನ:

ಹೊಡೆದಾಟ: 6 ಜನರಿಗೆ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುನಗುಂದ: ಪಟ್ಟಣದ ಎರಡು ಓಣಿಯ ಯುವಕರ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಬುಧವಾರ ಸಂಜೆ ನಡೆದ ಹೊಡೆದಾಟದಲ್ಲಿ 6 ಜನರು ಗಾಯಗೊಂಡಿದ್ದಾರೆ. ಇದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ಪಟ್ಟಣದ ವಿಜಯ ಮಹಾಂತೇಶ ಮಠದ ಆವರಣದಲ್ಲಿ ಮೇಗಲಪೇಟೆ ಹಾಗೂ ದರಗಾದ ಓಣಿಯ ಯುವಕರು ಕಬ್ಬಿಣದ ಸಲಾಕೆ, ಬಡಿಗೆಯಿಂದ ಹೊಡೆದಾಡಿಕೊಂಡಿದ್ದಾರೆ. ಪೊಲೀಸರು ಗುಂಪನ್ನು ಚದುರಿಸಿದ್ದಾರೆ. ಹೊಡೆದಾಟಕ್ಕೆ ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲವಾದರೂ, ಹಲವು ದಿನಗಳಿಂದ ಎರಡು ಓಣಿಯ ಯುವಕರ ಮಧ್ಯೆ ಸಣ್ಣಪುಟ್ಟ ವಿಚಾರಗಳಿಗೆ ಜಗಳವಾಗುತ್ತಿತ್ತು ಎನ್ನಲಾಗಿದೆ.

ಘಟನೆಯ ನಂತರ ಎರಡು ಓಣಿಯ ಜನರು ಮತ್ತು ಮಹಿಳೆಯರು ಪೊಲೀಸ್ ಠಾಣೆಯ ಮುಂದೆ ಜಮಾಯಿಸಿದ್ದರಿಂದ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಇತರ ಠಾಣೆಗಳಿಂದ ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ಕರೆಯಿಸಿ ಜನರನ್ನು ಚದುರಿಸಿದರು.

ಎರಡು ಕಡೆಯವರು ನೀಡಿದ ದೂರು, ಪ್ರತಿದೂರಿನ ಅನ್ವಯ ಒಟ್ಟು 18 ಜನರ ವಿರುದ್ದ ಪ್ರಕರಣ ದಾಖಲಿಸಿಕೊಂಡು 9 ಜನರನ್ನು ಬಂಧಿಸಲಾಗಿದೆ. ಡಿವೈಎಸ್ಪಿ ಚಂದ್ರಕಾಂತ ನಂದರೆಡ್ಡಿ, ಸಿಪಿಐ. ಕೆ. ಹೊಸಕೇರಪ್ಪ ಘಟನಾ ಸ್ಥಳಕ್ಕೆ ಭೇಟಿ ನೀಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು