ರಾಂಪುರ: ಸಮೀಪದ ಬಿಲ್ ಕೆರೂರ ಗ್ರಾಮದ ಬಿಲ್ವಾಶ್ರಮ ಹಿರೇಮಠದ ಲಿಂ.ರುದ್ರಮುನಿ ಶಿವಾಚಾರ್ಯರ 44 ನೆಯ ಪುಣ್ಯಸ್ಮರಣೋತ್ಸವದ ಅಂಗವಾಗಿ ಜೂನ್ 9 ಹಾಗೂ 10ರಂದು ನೂತನ ರಥದ ಲೋಕಾರ್ಪಣೆ, ಪೀಠಾಧಿಪತಿ ಸಿದ್ಧಲಿಂಗ ಶಿವಾಚಾರ್ಯರ ಜನ್ಮ ಸುವರ್ಣ ಮಹೋತ್ಸವ, ಗುರು ಪಟ್ಟಾಧಿಕಾರದ ರಜತ ಮಹೋತ್ಸವ, ಸರ್ವಧರ್ಮ ಸಾಮೂಹಿಕ ವಿವಾಹ ಕಾರ್ಯಕ್ರಮಗಳು ಜರುಗಲಿವೆ.

ಸೋಮವಾರ ಬೆಳಿಗ್ಗೆ 6ಕ್ಕೆ ಲಿಂ. ರುದ್ರಮುನಿ ಶಿವಾಚಾರ್ಯರ ಕರ್ತೃ ಗದ್ದುಗೆಗೆ ರುದ್ರಾಭಿಷೇಕ, ರಥದ ಪೂಜೆ, ಹೋಮ-ಹವನ, ಅಯ್ಯಾಚಾರ, ಶಿವದೀಕ್ಷೆ ಪೂಜಾ ಕಾರ್ಯಕ್ರಮಗಳು ಜರುಗಲಿದ್ದು, 9ಕ್ಕೆ ಹಲವು ಸ್ವಾಮೀಜಿಗಳ ಸಾನ್ನಿಧ್ಯ ಹಾಗೂ ಗಣ್ಯರ ಉಪಸ್ಥಿತಿಯಲ್ಲಿ ಧರ್ಮ ಧ್ವಜಾರೋಹಣ ಸಮಾರಂಭ ನಡೆಯಲಿದೆ. ಸಂಜೆ 4ಕ್ಕೆ ಬಾಗವ್ವ ಬಸಪ್ಪ ರಡ್ಡೇರ ಕುಟುಂಬದವರು ಕೊಡಮಾಡಿರುವ ಬೆಳ್ಳಿ ಉತ್ಸವ ಮೂರ್ತಿಯನ್ನು ಮಠಕ್ಕೆ ಸಮರ್ಪಿಸಲಾಗುವುದು.

ಸಂಜೆ 7ಕ್ಕೆ ಲಿಂ. ರುದ್ರಮುನಿ ಶಿವಾಚಾರ್ಯರ ಪುರಾಣ ಮಹಾಮಂಗಲ ಕಾರ್ಯಕ್ರಮ ಉಜೈನಿಯ ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ, ಕಾಶಿ ಪೀಠದ ಡಾ.ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿಯವರ ಸಾನ್ನಿಧ್ಯದಲ್ಲಿ ನಡೆಯಲಿದೆ. ನಿಡಗುಂದಿ, ಕಮತಗಿ, ಅಮೀನಗಡ, ಬೀಳಗಿ, ಕುಂದರಗಿ, ಬಾಗೇವಾಡಿ ಶ್ರೀ ಉಪಸ್ಥಿತಿಯಲ್ಲಿ ಮಾಜಿ ಶಾಸಕ ವೀರಣ್ಣ ಚರಂತಿಮಠ ಕಾರ್ಯಕ್ರಮ ಉದ್ಘಾಟಿಸುವರು. ಜನಪ್ರತಿನಿಧಿಗಳು, ವಿವಿಧ ಸಂಘ -ಸಂಸ್ಥೆಗಳ ಗಣ್ಯರು ಅತಿಥಿಗಳಾಗಿ ಭಾಗವಹಿಸುವರು.

ಜೂನ್ 10ರಂದು ಬೆಳಿಗ್ಗೆ 10.30ಕ್ಕೆ ಸಿದ್ಧಲಿಂಗ ಶಿವಾಚಾರ್ಯರ ಜನ್ಮ ಸುವರ್ಣ ಮಹೋತ್ಸವ, ಗುರು ಪಟ್ಟಾಧಿಕಾರದ ರಜತ ಮಹೋತ್ಸವ, ಸರ್ವಧರ್ಮ ಸಾಮೂಹಿಕ ವಿವಾಹ ಸಮಾರಂಭ ಜರುಗಲಿದೆ. ಉಜೈನಿ, ಕಾಶೀ ಶ್ರೀ ಸಾನ್ನಿಧ್ಯ ವಹಿಸುವರು. ಮುಕ್ತಿಮಂದಿರದ ವಿಮಲರೇಣುಕ ವೀರಮುಕ್ತಿಮನಿ ಶಿವಾಚಾರ್ಯರು ಅಧ್ಯಕ್ಷತೆ ವಹಿಸುವರು. ಗಿರಿಸಾಗರ, ಶಿವಗಂಗೆ, ಎಮ್ಮಿಗನೂರ ಶ್ರೀ ಉಪಸ್ಥಿತರಿರುವರು. ಹುನಗುಂದದ ಶಾಸಕ ವಿಜಯಾನಂದ ಕಾಶಪ್ಪನವರ, ಬಾಗಲಕೋಟೆ ಶಾಸಕ ಎಚ್.ವೈ.ಮೇಟಿ ಕಾರ್ಯಕ್ರಮ ಉದ್ಘಾಟಿಸುವರು. ಸಂಸದರು, ಶಾಸಕರು, ಗಣ್ಯರು ಅತಿಥಿಗಳಾಗಿ ಪಾಲ್ಗೊಳ್ಳುವರು.

ಸಂಜೆ 4ಕ್ಕೆ ನೂತನ ರಥದ ಲೋಕಾರ್ಪಣೆಯನ್ನು ಉಜೈನಿ ಹಾಗೂ ಕಾಶೀ ಶ್ರೀ ಮಾಡಲಿದ್ದು, ನಂತರ ಸಕಲ ವಾದ್ಯ ವೈಭವಗಳೊಂದಿಗೆ ರಥೋತ್ಸವ ಜರುಗಲಿದೆ ಎಂದು ಜಾತ್ರಾ ಮಹೋತ್ಸವ ಸಮಿತಿ ತಿಳಿಸಿದೆ.

ಹೆಲಿಕಾಪ್ಟರ್ ಮೂಲಕ ಪುಷ್ಪವೃಷ್ಟಿ: ನೂತನವಾಗಿ ನಿರ್ಮಿಸಲಾದ ರಥದ ಲೋಕಾರ್ಪಣೆ ಸಂದರ್ಭದಲ್ಲಿ ಶಾಸಕ ವಿಜಯಾನಂದ ಕಾಶಪ್ಪನವರ ಭಕ್ತಿ ಸೇವೆಯಿಂದ ರಥಕ್ಕೆ ಹೆಲಿಕಾಪ್ಟರ್ ಮುಖಾಂತರ ಪುಷ್ಪವೃಷ್ಟಿಯಾಗಲಿದೆ ಎಂದು ಮಠದ ಪೀಠಾಧಿಪತಿ ಸಿದ್ಧಲಿಂಗ ಶಿವಾಚಾರ್ಯರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.