ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆರೂರು: ಹಿಂದೂ–ಮುಸ್ಲಿಂ ಯುವಕರ ನಡುವೆ ಗಲಾಟೆ, ಮೂವರಿಗೆ ಚಾಕು ಇರಿತ

Last Updated 6 ಜುಲೈ 2022, 18:17 IST
ಅಕ್ಷರ ಗಾತ್ರ

ಬಾಗಲಕೋಟೆ: ಬಾದಾಮಿ ತಾಲ್ಲೂಕಿನ ಕೆರೂರು ಬಸ್‌ ನಿಲ್ದಾಣದಲ್ಲಿ ಬುಧವಾರ ಸಂಜೆ ಹಿಂದೂ–ಮುಸ್ಲಿಂ ಯುವಕರ ನಡುವೆ ಗಲಾಟೆ ನಡೆದಿದ್ದು, ಮೂವರಿಗೆ ಗಾಯಗಳಾಗಿವೆ.

ಗಲಾಟೆಯಲ್ಲಿ ಅರುಣ್, ಲಕ್ಷ್ಮಣ ಎಂಬುವವರಿಗೆ ಚಾಕುವಿನಿಂದ ಇರಿಯಲಾಗಿದೆ. ಯಮನೂರ ಎಂಬುವವರು ಗಾಯಗೊಂಡಿದ್ದಾರೆ. ಅರುಣ, ಹಿಂದೂ ಜಾಗರಣ ವೇದಿಕೆ ಕಾರ್ಯದರ್ಶಿಯಾಗಿದ್ದಾರೆ. ಅವರನ್ನು ಬಾಗಲಕೋಟೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಷಯ ತಿಳಿಯುತ್ತಿದ್ದಂತೆಯೇ ಮಾರುಕಟ್ಟೆ ಪ್ರದೇಶದಲ್ಲಿ ಬೈಕ್‌ ಹಾಗೂ ಎರಡು ತಳ್ಳುಗಾಡಿಗಳಿಗೆ ಬೆಂಕಿ ಹಚ್ಚಲಾಗಿದೆ. ಪರಿಸ್ಥಿತಿ ಬಿಗುವಿನಿಂದ ಕೂಡಿದೆ. ಪಟ್ಟಣದಲ್ಲಿ ಸೂಕ್ತ ಬಂದೋಬಸ್ತ್‌ ಒದಗಿಸಲಾಗಿದೆ ಎಂದು ಕೆರೂರು ಪ್ರಭಾರಿ ಪಿಎಸ್‌ಐ ವೈ.ಎಸ್. ಪಠಾಣ ‘ಪ್ರಜಾವಾಣಿ‘ಗೆ ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠ ಜಯಪ್ರಕಾಶ, ಸಿಪಿಐ ಭೀಮಣ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನಿಷೇಧಾಜ್ಞೆ: ಶಾಲಾ–ಕಾಲೇಜುಗಳಿಗೆ ರಜೆ

ಬಾದಾಮಿ ತಾಲ್ಲೂಕಿನ ಕೆರೂರು ಬಸ್‌ ನಿಲ್ದಾಣದಲ್ಲಿ ಬುಧವಾರ ಸಂಜೆ ಹಿಂದೂ–ಮುಸ್ಲಿಂ ಯುವಕರ ನಡುವೆ ನಡೆದಿರುವ ಗಲಾಟೆ ಹಿನ್ನೆಲೆಯಲ್ಲಿ ಬುಧವಾರ ಮಧ್ಯರಾತ್ರಿಯಿಂದ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಜು.6 ರಿಂದ ಜು.8ರ ರಾತ್ರಿ 8 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲ್‌ ಕುಮಾರ ತಿಳಿಸಿದ್ದಾರೆ.

ಮುಂಜಾಗ್ರತಾ ಕ್ರಮವಾಗು ಗುರುವಾರ ಕೆರೂರಿನ ಶಾಲಾ–ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT