ಬುಧವಾರ, ಜುಲೈ 28, 2021
23 °C

ವೈಯಕ್ತಿಕ ಹಣ ಕೊಟ್ಟು ನೊಂದವರ ಮನಗೆದ್ದರು!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಾದಾಮಿ: ಸಮೀಪದ ಹೊಸೂರಿನಲ್ಲಿ ಸಿಡಿಲು ಬಡಿದು ಮೃತಪಟ್ಟ ಮಹಿಳೆಯ ಮನೆಗೆ ಗುರುವಾರ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿ ವೈಯಕ್ತಿಕವಾಗಿ ₹1 ಲಕ್ಷ ಪರಿಹಾರ ನೀಡಿದರು.

ನಂತರ ಕೋವಿಡ್–19 ಹರಡುವಿಕೆ ಕಾರಣ ಸೀಲ್ ಡೌನ್ ಆಗಿದ್ದ ಢಾಣಶಿರೂರ ಗ್ರಾಮದ ಚೆಕ್‌ಪೋಸ್ಟ್‌ಗೆ ತೆರಳಿ ಗ್ರಾಮಸ್ಥರನ್ನು ಭೇಟಿಯಾಗಿ ಧೈರ್ಯ ತುಂಬಿದರು.

ನಂದಿಕೇಶ್ವರದಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತನ ಮನೆಗೆ ತೆರಳಿ ಕುಟುಂಬದವರಿಗೆ ಸಾಂತ್ವನ ಹೇಳಿ ಸರ್ಕಾರದ ₹5 ಲಕ್ಷ ಪರಿಹಾರ ಮೊತ್ತದ ಚೆಕ್ ಮತ್ತು ವೈಯಕ್ತಿಕವಾಗಿ ₹1 ಲಕ್ಷ ವಿತರಿಸಿದರು. ಅಪಘಾತದಲ್ಲಿ ಮೃತಪಟ್ಟ ಅಂಗನವಾಡಿ ಕಾರ್ಯಕರ್ತೆಯ ಮನೆಗೆ ತೆರಳಿ ಸಾಂತ್ವನ ಹೇಳಿ ವೈಯಕ್ತಿಕವಾಗಿ ₹1 ಲಕ್ಷ ನೆರವು ನೀಡಿದರು.

ಕೊರೊನಾ ಕರ್ತವ್ಯದಲ್ಲಿ ಇದ್ದ ವೇಳೆ ಮೃತಪಟ್ಟ ಅಂಗನವಾಡಿ ಶಿಕ್ಷಕಿಯ ಕುಟುಂಬಕ್ಕೆ ಸರ್ಕಾರದಿಂದ ₹ 30 ಲಕ್ಷ ವಿಮಾ ಮೊತ್ತ ನೀಡುವಂತೆ ಆರೋಗ್ಯ ಸಚಿವರಿಗೆ ಒತ್ತಾಯಿಸಿದ್ದೇನೆ ಎಂದರು. ಈಚೆಗೆ ಗ್ರಾಮದಲ್ಲಿ ಸಿಡಿಲು ಬಡಿದು ಮೃತಪಟ್ಟ ರೈತನ ಮನೆಗೆ ತೆರಳಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.