ಗುರುವಾರ, 16 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಳಕಲ್‍ ನಗರಸಭೆ : ಅಧ್ಯಕ್ಷ ಸ್ಥಾನಕ್ಕೆ ತೀವ್ರ ಪೈಪೋಟಿ

ಬಿಜೆಪಿಯಲ್ಲಿ ಹೆಚ್ಚಿದ ಆಕಾಂಕ್ಷಿಗಳ ಸಂಖ್ಯೆ
Last Updated 14 ಅಕ್ಟೋಬರ್ 2020, 17:48 IST
ಅಕ್ಷರ ಗಾತ್ರ

ಇಳಕಲ್: ಇಲ್ಲಿನ ನಗರಸಭೆಯ ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮತ್ತು ಉಪಾಧ್ಯಕ್ಷ ಸ್ಥಾನ ಹಿಂದುಳಿದ ‘ಅ’ ವರ್ಗಕ್ಕೆ (ಬಿಸಿಎ) ಮೀಸಲಾಗಿದೆ. ಇದೇ 20ರಂದು ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ಬಿಜೆಪಿ ಬಹುಮತ ಹೊಂದಿದ್ದು, ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾದ ಕಾರಣ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದೆ. ಶಾಸಕ ದೊಡ್ಡನಗೌಡ ಪಾಟೀಲ ಮುಂದಿನ ಅಧ್ಯಕ್ಷ, ಉಪಾಧ್ಯಕ್ಷ ಯಾರಾಗಬೇಕು ಎಂಬುದನ್ನು ನಿರ್ಧರಿಸಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

31 ಸದಸ್ಯ ಬಲದ ನಗರಸಭೆಯಲ್ಲಿ 20 ಬಿಜೆಪಿ ಎಂಟು ಕಾಂಗ್ರೆಸ್, ಎರಡು ಜೆಡಿಎಸ್ ಹಾಗೂ ಒಬ್ಬರು ಪಕ್ಷೇತರ ಸದಸ್ಯರಿದ್ದಾರೆ. ಸ್ಪಷ್ಟ ಬಹುಮತ ಹೊಂದಿರುವ ಬಿಜೆಪಿಯಿಂದ ಅಧ್ಯಕ್ಷ ಸ್ಥಾನಕ್ಕೆ ಲಕ್ಷ್ಮಣ ಗುರಂ, ಶೋಭಾ ಆಮದಿಹಾಳ, ಮಂಜುನಾಥ ಶೆಟ್ಟರ್, ವಿಜಯ ಗಿರಡ್ಡಿ ಹಾಗೂ ಚೋಳಪ್ಪ ಇಂಡಿ ಹೆಸರು ಕೇಳಿ ಬಂದಿವೆ. ಉಪಾಧ್ಯಕ್ಷ ಸ್ಥಾನಕ್ಕೆ ಸುಗೂರೇಶ ನಾಗಲೋಟಿ, ಶೇಖರ ಏಕಬೋಟೆ, ದತ್ತಾತ್ರೇಯ ಗುಳೇದ ನಡವೆ ಪೈಪೋಟಿ ಇದೆ.

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿ ನಗರಸಭೆಗೆ ಪುನರಾಯ್ಕೆ ಆಗಿರುವ ಶೋಭಾ ಆಮದಿಹಾಳ ಅವರಿಗೆ ಬಿಜೆಪಿ ಪ್ರಮಖರು ಅಧ್ಯಕ್ಷ ಸ್ಥಾನ ನೀಡುವ ಭರವಸೆ ನೀಡಿದ್ದರು ಎನ್ನಲಾಗುತ್ತಿದೆ. ಏಳು ಬಾರಿ ನಗರಸಭೆಗೆ ಆಯ್ಕೆಯಾಗಿರುವ ಲಕ್ಷ್ಮಣ ಗುರಂ, ನಗರ ಬಿಜೆಪಿ ಘಟಕದ ಅಧ್ಯಕ್ಷರಾಗಿ ಕೆಲಸ ಮಾಡಿದ ಮಂಜುನಾಥ ಶೆಟ್ಟರ್ ಹಾಗೂ ಎರಡನೇ ಬಾರಿಗೆ ಸದಸ್ಯರಾಗಿರುವ ವಿಜಯ ಗಿರಡ್ಡಿ ಅಧ್ಯಕ್ಷರಾಗಲು ತೀವ್ರ ಪ್ರಯತ್ನ ನಡೆಸಿದ್ದಾರೆ.

ಈಚೆಗೆ ಶಾಸಕ ದೊಡ್ಡನಗೌಡ ಪಾಟೀಲ ಕರೆದಿದ್ದ ಬಿಜೆಪಿ ನಗರಸಭೆ ಸದಸ್ಯರ ಸಭೆಯಲ್ಲಿ ಪಕ್ಷದ ತೀರ್ಮಾನಕ್ಕೆ ಬದ್ಧರಾಗಿರುವುದಾಗಿ ಸದಸ್ಯರು ಒಪ್ಪಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಐದು ವರ್ಷಗಳ ಅಧಿಕಾರವಧಿಯಲ್ಲಿ ತಲಾ 15 ತಿಂಗಳಂತೆ ನಾಲ್ವರಿಗೆ ಅಧ್ಯಕ್ಷ ಸ್ಥಾನ, ನಾಲ್ವರಿಗೆ ಉಪಾಧ್ಯಕ್ಷ ಸ್ಥಾನ ಹಾಗೂ ನಾಲ್ವರಿಗೆ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನ ಹಂಚಿಕೆ ಮಾಡುವ ಚಿಂತನೆ ಪಕ್ಷದಲ್ಲಿ ನಡೆದಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT