ಅಮೀನಗಡ: ‘ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳನ್ನು ಪ್ರತಿ ಮನೆ ಮನೆಗೆ ತಲುಪಿಸಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಲು ಕಾರ್ಯಕರ್ತರು ಒಗ್ಗಟ್ಟಾಗಿ ಕೆಲಸ ಮಾಡಬೇಕು’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಭಾನುವಾರ ಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ ಅವರ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ‘ಎಚ್.ವೈ ಮೇಟಿ ತಮ್ಮ ಕ್ಷೇತ್ರದಲ್ಲಿ ಸಮಗ್ರ ಅಭಿವೃದ್ಧಿಗಾಗಿ ಕಾರ್ಯ ಮಾಡಿ ಜನಪರ ವ್ಯಕ್ತಿಯಾಗಿದ್ದವರು. ಅವರ ನಿಧನದ ಕಾರಣದಿಂದ ನಡೆಯುವ ಈ ಉಪಚುನಾವಣೆಯಲ್ಲಿ ಉಮೇಶ ಮೇಟಿ ಗೆಲ್ಲಿಸುವ ಮೂಲಕ ಮತ್ತೆ ಕಾಂಗ್ರೆಸ್ಸಿಗೆ ಬೆಂಬಲಿಸಬೇಕು’ ಎಂದು ಮನವಿ ಮಾಡಿದರು.

ಅಭ್ಯರ್ಥಿ ಉಮೇಶ ಮೇಟಿ ಮಾತನಾಡಿ, ತಂದೆಯವರಂತೆ ನನಗೂ ನಿಮ್ಮ ಸೇವೆ ಮಾಡಲು ಅವಕಾಶ ಮಾಡಿಕೊಡಿ. ಕ್ಷೇತ್ರ ಅಭಿವೃದ್ಧಿಗಾಗಿ ಶ್ರಮಿಸುವೆ ಕೋರಿದರು.

ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ, ಜಿಲ್ಲಾ ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ, ಮುಖಂಡ ಮಲ್ಲಿಕಾರ್ಜುನ ಚರಂತಿಮಠ ಮಾತನಾಡಿದರು.

ಶಾಸಕರಾದ ಭೀಮಸೇನ ಚಿಮ್ಮನಕಟ್ಟಿ, ಎನ್.ಎಚ್.ಕೋನರೆಡ್ಡಿ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಬಾಯಕ್ಕ ಮೇಟಿ, ಮಾಜಿ ಉಪಾಧ್ಯಕ್ಷ ಎಸ್. ಎಸ್ ಚಳ್ಳಗಿಡದ ಪಾಲ್ಗೊಂಡಿದ್ದರು. ಸಚಿವ ಸತೀಶ ಜಾರಕಿಹೊಳಿ ಕ್ಷೇತ್ರದ ಐಹೊಳೆ, ಕಮತಗಿಯಲ್ಲಿಯೂ ಪ್ರಚಾರ ನಡೆಸಿದರು

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260330-19-1793388680

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.