ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪಾಟೀಲ ಆಸ್ತಿ ಮೌಲ್ಯ ₹2.92 ಕೋಟಿ

Published 15 ಏಪ್ರಿಲ್ 2024, 9:21 IST
Last Updated 15 ಏಪ್ರಿಲ್ 2024, 9:21 IST
ಅಕ್ಷರ ಗಾತ್ರ

ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪಾಟೀಲ ಸೋಮವಾರ ನಾಮಪತ್ರ ಸಲ್ಲಿಸಿದರು.

ಒಟ್ಟು ₹2.92 ಕೋಟಿ ಆಸ್ತಿ ಹೊಂದಿದ್ದು, ₹93.66 ಲಕ್ಷ ಚರಾಸ್ತಿ, ₹ 1.99 ಕೋಟಿ ಸ್ಥಿರಾಸ್ತಿ ಹೊಂದಿದ್ದಾರೆ.

₹3.09 ಲಕ್ಷ ಸಾಲ ಹೊಂದಿದ್ದು, 500 ಗ್ರಾಂ ಚಿನ್ನ, 5 ಕೆಜಿ ಬೆಳ್ಳಿ ಹೊಂದಿದ್ದಾರೆ. ಇವರ ಹೆಸರಿನಲ್ಲಿ ಯಾವುದೇ ವಾಹನ ಹೊಂದಿಲ್ಲ.

ಮುಹೂರ್ತ ಚೆನ್ನಾಗಿದೆ ಎಂದು ಸೋಮವಾರ ಬೆರಳೆಣಿಕೆಯ ಮುಖಂಡರೊಂದಿಗೆ ಬಂದು ನಾಮಪತ್ರ ಸಲ್ಲಿಸಿದರು.

ಮಾಜಿ ಸಂಸದ ಅಜಯಕುಮಾರ ಸರನಾಯಕ, ಶಾಸಕ ಭೀಮಸೇನ ಚಿಮ್ಮನಕಟ್ಟಿ, ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ, ಎಂ.ಬಿ. ಸೌದಾಗರ ಇದ್ದರು.

ಬೆಂಬಲಿಗರ ಮೆರವಣಿಗೆಯೊಂದಿಗೆ ಏ.19 ರಂದು ಮತ್ತೊಮ್ಮೆ ನಾಮಪತ್ರ ಸಲ್ಲಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT