ಜಮಖಂಡಿ: ರಾಜ್ಯದ ಕಾಂಗ್ರೆಸ್ ಸರ್ಕಾರ ಪ್ರಜಾಪ್ರಭುತ್ವ ವಿರೋಧಿ ಕಾನೂನು ಜಾರಿಗೆ ತರುವ ಹುನ್ನಾರ ನಡೆಸಿದೆ. ಸಾರ್ವಜನಿಕರು, ವಿಪಕ್ಷಗಳು, ಮಾಧ್ಯಮಗಳ ಅಭಿವ್ಯಕ್ತಿ ಸ್ವತಂತ್ಯ್ರವನ್ನು ಹತ್ತಿಕ್ಕುವ ಯತ್ನದಲ್ಲಿ ತೊಡಗಿದೆ ಎಂದು ಶಾಸಕ ಜಗದೀಶ ಗುಡಗುಂಟಿ ಆರೋಪಿಸಿದರು.

ತಾಲ್ಲೂಕು ಆಡಳಿತ ಸೌಧದ ಮುಂದೆ ಬಿಜೆಪಿ ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ಪ್ರತಿಭಟನೆ ಯಲ್ಲಿ ತಹಶೀಲ್ದಾರ ಅನೀಲ ಬಡಿಗೇರಗೆ ಮನವಿ ಸಲ್ಲಿಸಿ ಮಾತನಾಡಿ ಕಾಂಗ್ರೆಸ್ ಸರ್ಕಾರ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ 2025ನ್ನು ತರಾತುರಿಯಲ್ಲಿ ಅಂಗೀಕರಿಸಿ ಒಂದು ಕೋಮಿನವರನ್ನು ಎತ್ತಿಕಟ್ಟುವ ಹುನ್ನಾರ ನಡೆಸಿದೆ ಎಂದು ಟೀಕಿಸಿದರು.

ಸರ್ಕಾರದ ಈ ಜನವಿರೋಧಿ ನೀತಿಯನ್ನು ಬಿಜೆಪಿ ಖಂಡಿಸುತ್ತದೆ ಹಾಗೂ ಕಾನೂನು ಜಾರಿಗೆ ತರದಂತೆ ರಾಜ್ಯಪಾಲರಲ್ಲಿ ಮನವಿ ಮಾಡುತ್ತೇವೆ ಎಂದರು. ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿ ಮಾತನಾಡಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ಯಾರೂ ಮಾತನಾಡದಂತೆ ತಡೆಯುವ, ಜನವಿರೋಧಿ ಕಾನೂನು ಜಾರಿಗೆ ತರಲು ಸರ್ಕಾರ ಮುಂದಾಗಿದೆ ಎಂದರು.

ಮುಖಂಡ ಸಿ.ಟಿ.ಉಪಾಧ್ಯ ಮಾತನಾಡಿ ಕಾನೂನಿನ ಅಡಿ ಪ್ರತಿಬಂಧಕ ಕ್ರಮಗಳನ್ನು ಸಹ ಉಲ್ಲೇಖಿಸಲಾಗಿದೆ. ಪೊಲೀಸರು ಅಥವಾ ಅಧಿಕಾರಿಗಳು ಸಂಭಾವ್ಯ ಅಪರಾಧ ಎಂದು ಭಾವಿಸಿ ಮುಂಚಿತವಾಗಿ ಕ್ರಮ ಕೈಗೊಳ್ಳಬಹುದು. ಇದರಿಂದ ಪ್ರತಿಭಟನೆಗಳು ಸಭೆಗಳು ಅಥವಾ ಸಾಮಾಜಿಕ ಚಳವಳಿಗಳನ್ನು ತಡೆಯುವ ಉದ್ದೇಶ ಇದ್ದಂತಿದೆ. ಇಂತಹ ಕಾಯಿದೆ ಯಾವ ಕಾರಣಕ್ಕೂ ಜಾರಿಯಾಗಬಾರದು ಎಂದರು.

ಮಾಜಿ ಡಿಸಿಸಿ ಬ್ಯಾಂಕ ನಿರ್ದೇಶಕ ಏಗಪ್ಪ ಸವದಿ, ಅಜಯ ಕಡಪಟ್ಟಿ, ಮಲ್ಲು ದಾನಗೌಡ, ಗಣೇಶ ಶಿರಗಣ್ಣವರ, ಡಾ.ವಿಜಯಲಕ್ಷ್ಮೀ ತುಂಗಳ, ಗೀತಾ ಸೂರ್ಯವಂಶಿ, ಯಮನೂರು ಮೂಲಂಗಿ, ಸಂಗಮೇಶ ದಳವಾಯಿ, ಈಶ್ವರ ಆದೆಪ್ಪನವರ, ಕುಷಾಲ ವಾಘಮೊರೆ, ಶ್ರೀಧರ ಕಂಬಿ, ಶಂಕರ ಕಾಳೆ, ಸುರೇಶಗೌಡ ಪಾಟೀಲ, ರಾಜುಗೌಡ ಪಾಟೀಲ ಬಸವರಾಜ ಬಿರಾದಾರ, ಕೃಷ್ಣಾ ತಳವಾರ, ರಮೇಶ ಆಳಬಾಳ, ರವಿ ತೊದಲಬಾಗಿ, ವೃಷಭನಾಥ ಆಲಗೂರ, ಪ್ರಕಾಶ ಹುಕ್ಕೆಣ್ಣವರ, ರಾಜು ಗೆಣ್ಣೂರ, ಸಿದ್ದು ಬಿಳ್ಳೂರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.