ಬುಧವಾರ, ನವೆಂಬರ್ 25, 2020
21 °C

ಜನರ ತೀರ್ಪು ಒಪ್ಪಿಕೊಳ್ಳುತ್ತೇವೆ: ಸಿದ್ದರಾಮಯ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಗಲಕೋಟೆ: ಉಪಚುನಾವಣೆಯಲ್ಲಿ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದಿದೆ. ಶಿರಾದಲ್ಲಿ ನಾವು ಗೆಲ್ಲುವ ನಿರೀಕ್ಷೆ ಇತ್ತು. ಆರ್.ಆರ್.  ನಗರದಲ್ಲಿ ಒಳ್ಳೆಯ ಫೈಟ್ ಕೊಡ್ತಿವಿ ಎಂದುಕೊಂಡಿದ್ವಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ಕೊಟ್ಟ ತೀರ್ಪು ಒಪ್ಪಿಕೊಳ್ಳಬೇಕಾಗುತ್ತೇ. ಜನರು ಕೊಟ್ಟ ತೀರ್ಪು ನಾವು ಒಪ್ಪಿಕೊಂಡಿದ್ದೇವೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಬಾದಾಮಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸರ್ಕಾರದಲ್ಲಿರೋರು ಚುನಾವಣೆ ನಿಷ್ಪಕ್ಷಪಾತ, ಮುಕ್ತವಾಗಿ ನಡೆಸೋದು ಜವಾಬ್ದಾರಿ ಹೊಂದಿರುತ್ತಾರೆ. ಆದರೆ ನನಗೆ ಇರುವ ಮಾಹಿತಿ ಪ್ರಕಾರ ಬಿಜೆಪಿ ಅಧಿಕಾರ ದುರುಪಯೋಗಪಡಿಸಿಕೊಂಡಿದೆ. ಆದರೂ ತೀರ್ಪು ಒಪ್ಪಿಕೊಳ್ಳಲೇಬೇಕು, ಹಾಗಾಗಿ ಒಪ್ಪಿಕೊಂಡಿದ್ದೇವೆ’ ಎಂದರು.

ಬೈ ಎಲೆಕ್ಷನ್ ಬಳಿಕ ಯಡಿಯೂರಪ್ಪ ಸಿಎಂ ಸ್ಥಾನದಿಂದ ಕೆಳಗಿಳಿಯುತ್ತಾರೆ ಎಂದು ನೀಡಿದ್ದ ಹೇಳಿಕೆಯನ್ನು ಪುನರುಚ್ಚರಿಸಿದ ಸಿದ್ದರಾಮಯ್ಯ, ಈಗಲೂ ನನ್ನ ಹೇಳಿಕೆಗೆ ಬದ್ಧನಿದ್ದೇನೆ. ನನಗಿರುವ ಮಾಹಿತಿ ಪ್ರಕಾರ ಬಿ.ಎಸ್.ಯಡಿಯೂರಪ್ಪ ಸಿಎಂ ಸ್ಥಾನದಿಂದ ಕೆಳಗಿಳಿತಾರೆ ಎಂದು ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು