ಅಗ್ನಿಪಥ ರದ್ದತಿಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಬಾಗಲಕೋಟೆ: ಕೇಂದ್ರವು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳುವ ಅಗ್ನಿಪಥ ಯೋಜನೆ ರದ್ದು ಮಾಡಬೇಕು ಎಂದು ಆಗ್ರಹಿಸಿ ಸೋಮವಾರ ಕಾಂಗ್ರಸ್ ಮುಖಂಡರು ತಹಶೀಲ್ದಾರ್ ಕಚೇರಿ ಮುಂದೆ ಧರಣಿ ಮಾಡಿದರು.
ನಾಲ್ಕು ವರ್ಷದ ನಂತರ ಸೇನೆಯಿಂದ ಕೈಬಿಟ್ಟರೆ ಯುವಕರು ನಿರುದ್ಯೋಗಿಗಳಾಗುತ್ತಾರೆ. ಈ ಯೋಜನೆಯು ಅವೈಜ್ಞಾನಿಕವಾಗಿದೆ. ಆದ್ದರಿಂದ ಅದನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.
ಮುಖಂಡರಾದ ಎಚ್.ವೈ. ಮೇಟಿ, ನಾಗರಾಜ ಹದ್ಲಿ, ರಕ್ಷಿತಾ ಈಟಿ ಇದ್ದರು
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.