ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್: ಕೇಂದ್ರದ ಮಸೂದೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ

Last Updated 2 ಅಕ್ಟೋಬರ್ 2020, 15:48 IST
ಅಕ್ಷರ ಗಾತ್ರ

ಬೀದರ್: ಕಿಸಾನ್-ಮಜ್ದೂರ್ ಬಚಾವೋ ದಿನದ ಪ್ರಯುಕ್ತ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ರೈತ ಹಾಗೂ ಕಾರ್ಮಿಕ ವಿರೋಧಿ ಮಸೂದೆಗಳನ್ನು ವಿರೋಧಿಸಿ ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಅವರ ನೇತೃತ್ವದಲ್ಲಿ ಶಿವನಗರದಲ್ಲಿ ಇರುವ ಪಕ್ಷದ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿ ರಾಷ್ಟ್ರಪತಿಗೆ ಬರೆದ ಮನವಿ ಪತ್ರವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ ಅವರಿಗೆ ಸಲ್ಲಿಸಿದರು.

ರೈತರು, ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಮಸೂದೆ 2020, ಬೆಲೆ ಖಾತರಿ ಕೃಷಿ ಸೇವೆಗಳ ಮಸೂದೆ 2020 ರ ರೈತರ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದ ಹಾಗೂ ಅಗತ್ಯ ಸರಕುಗಳ (ತಿದ್ದುಪಡಿ) ಮಸೂದೆ 2020 ಅನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು.

ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ ಅರಳಿ, ಮಾಜಿ ಸಂಸದ ನರಸಿಂಗರಾವ್ ಸೂಂiÀರ್iವಂಶಿ, ವಿಧಾನ ಪರಿಷತ್ ಮಾಜಿ ಸದಸ್ಯ ಕೆ. ಪುಂಡಲೀಕರಾವ್, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಗಳಾದ ದತ್ತಾತ್ರಿ ಮೂಲಗೆ, ಎಂ.ಎ. ಸಮಿ, ಆನಂದ ದೇವಪ್ಪ, ಕಿಸಾನ್ ಸೆಲ್ ಜಿಲ್ಲಾ ಘಟಕದ ಅಧ್ಯಕ್ಷ ಅಶೋಕ ಸೋನಜಿ, ಮುಖಂಡರಾದ ರಾಜಶೇಖರ ಪಾಟೀಲ ಅಷ್ಟೂರ, ಶಿವರಾಜ ಹಾಸನಕರ್, ಮುರಳೀಧರ ಎಕಲಾರಕರ್, ಫರ್ನಾಂಡೀಸ್ ಹಿಪ್ಪಳಗಾಂವ್, ರೋಹಿದಾಸ್ ಘೋಡೆ, ಪರ್ವೇಜ್ ಕಮಲ್, ಶಂಕರ ದೊಡ್ಡಿ, ಬಶಿರೊದ್ದೀನ್ ಹಾಲಹಿಪ್ಪರ್ಗಾ, ಶಂಕರರರೆಡ್ಡಿ ಚಿಟ್ಟಾ ಮೊದಲಾದವರು ಪಾಲ್ಗೊಂಡಿದ್ದರು.

ಗಾಂಧಿ, ಶಾಸ್ತ್ರಿ ಜಯಂತಿ:
ಪಕ್ಷದ ಕಚೇರಿಯಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಜಯಂತಿ ಆಚರಿಸಲಾಯಿತು.
ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಅವರು ಗಾಂಧೀಜಿ ಹಾಗೂ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.
ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ ಅರಳಿ ಮಾತನಾಡಿದರು. ಪಕ್ಷದ ಮುಖಂಡರು, ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT