ಭಾನುವಾರ, ಜೂಲೈ 5, 2020
28 °C

ಈಗಿನ ಸದಸ್ಯರನ್ನೇ 6 ತಿಂಗಳು ಮುಂದುವರೆಸಿ, ಇಲ್ಲವೇ ಚುನಾವಣೆ ನಡೆಸಿ: ಜಾರಕಿಹೊಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಾಗಲಕೋಟೆ: ‘ಗ್ರಾಮ ಪಂಚಾಯ್ತಿಗಳಿಗೆ ಈಗಿರುವ ಸದಸ್ಯರನ್ನೇ ಸರ್ಕಾರ ಆರು ತಿಂಗಳು ಮುಂದುವರೆಸಲಿ. ಇಲ್ಲವೇ ಚುನಾವಣೆ ನಡೆಸಲಿ. ಯಾವುದೇ ಕಾರಣಕ್ಕೂ ಹೊಸಬರ ನಾಮನಿರ್ದೇಶನ ಒಪ್ಪುವುದಿಲ್ಲ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್–19 ಸೋಂಕಿನ ನೆಪದಲ್ಲಿ ಸರ್ಕಾರ ಬಿಜೆಪಿ ಕಾರ್ಯಕರ್ತರನ್ನು ಪಂಚಾಯ್ತಿಗಳಿಗೆ ನಾಮನಿರ್ದೇಶನ ಮಾಡಿ ಅವರಿಗೆ ಅಧಿಕಾರ ಕೊಡಲು ಹೊರಟಿದೆ ಎಂದು ಟೀಕಿಸಿದರು.

ಎಂಟು ಲಕ್ಷ ಮಂದಿ ವೀಕ್ಷಣೆಗೆ ಅವಕಾಶ..
ಜೂನ್ 7ರಂದು ಕೆಪಿಸಿಸಿ ಅಧ್ಯಕ್ಷರು, ಕಾರ್ಯಾಧ್ಯಕ್ಷರು ಸೇರಿದಂತೆ ವಿವಿಧ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಬೆಂಗಳೂರಿನಲ್ಲಿ ನಡೆಯಲಿದೆ. ಅದನ್ನು ಆನ್‌ಲೈನ್ ಮೂಲಕ ವೀಕ್ಷಣೆಗೆ ಪ್ರತೀ ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ವ್ಯವಸ್ಥೆ ಮಾಡಲಾಗುವುದು. ಒಂದು ಪಂಚಾಯ್ತಿ ವ್ಯಾಪ್ತಿಯಲ್ಲಿ ಸುರಕ್ಷಿತ ಅಂತರ ಕಾಯ್ದುಕೊಂಡು 50ರಂತೆ 8 ಲಕ್ಷ ಮಂದಿಗೆ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗುವುದು ಎಂದರು.

ಮೂಗಿಗೆ ತುಪ್ಪ ಸವರುವ ಕೆಲಸ..
ಕೊರೊನಾ ಪ್ಯಾಕೇಜ್ ಹೆಸರಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜನರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಿವೆ ಎಂದು ಟೀಕಿಸಿದ ಜಾರಕಿಹೊಳಿ, ಉತ್ತರ ಕರ್ನಾಟಕದಲ್ಲಿ ಪ್ರವಾಹದ ವೇಳೆ ಸಂತ್ರಸ್ಥರಿಗೆ ಘೋಷಿಸಿದ್ದ ಪರಿಹಾರವನ್ನೇ ಸರ್ಕಾರ ಇನ್ನೂ ಕೊಟ್ಟಿಲ್ಲ. ಕೊರೊನಾ ಪ್ಯಾಕೇಜ್‌ ಅಡಿ ಜನರಿಗೆ ಪರಿಹಾರ ಕೊಡುತ್ತಾರೆಯೇ ಎಂದು ಪ್ರಶ್ನಿಸಿದರು.

’ಬ್ಯಾಂಕಿನಿಂದ ಕೊಡುವ ಸಾಲವನ್ನು ಪ್ರಧಾನಿ ನರೇಂದ್ರ ಮೋದಿ ತಮ್ಮ ₹20 ಲಕ್ಷ ಕೋಟಿ ಮೊತ್ತದ ಕೊರೊನಾ ಪ್ಯಾಕೇಜ್‌ನಲ್ಲಿ ಸೇರಿಸಿದ್ದಾರೆ. ಗ್ಯಾರಂಟಿ ಇಲ್ಲದೇ ಬ್ಯಾಂಕ್ ಸಾಲ ಕೊಡುವುದಿಲ್ಲ. ಕೊಟ್ಟರೂ ಬಡ್ಡಿ ಹಾಕಿ ವಸೂಲಿ ಮಾಡುತ್ತಾರೆ. ಅದನ್ನು ಸರ್ಕಾರದ ನೆರವು ಎಂದು ಪರಿಗಣಿಸಬೇಕೆ? ಇದೆಲ್ಲಾ ಜನರನ್ನು ದಾರಿ ತಪ್ಪಿಸುವ ಕೆಲಸ‘ ಎಂದು ವ್ಯಂಗ್ಯವಾಡಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಬಾಯಕ್ಕ ಮೇಟಿ, ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ಅಜಯಕುಮಾರ ಸರನಾಯಕ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಸ್.ಜಿ.ನಂಜಯ್ಯನಮಠ, ಮಹಿಳಾ ಘಟಕದ ಅಧ್ಯಕ್ಷೆ ರಕ್ಷಿತಾ ಈಟಿ, ಮಾಜಿ ಶಾಸಕರಾದ ಎಚ್.ವೈ.ಮೇಟಿ, ಜೆ.ಟಿ.ಪಾಟೀಲ, ಕೆಪಿಸಿಸಿ ಮುಖಂಡ ಬಸವಪ್ರಭು ಸರನಾಡಗೌಡ, ವಕ್ತಾರ ಅನಿಲ್‌ಕುಮಾರ ದಡ್ಡಿ, ಬಾದಾಮಿಯ ಮುಖಂಡ ಮಹೇಶ ಹೊಸಗೌಡ್ರ ಮತ್ತಿತರರು ಹಾಜರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು