ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಜಿಲ್ಲೆಯಲ್ಲಿ ಕೊರೊನಾ ಸೋಂಕು ಇಲ್ಲ’

ಜನರು ಆತಂಕಕ್ಕೊಳಗಾಗುವ ಅಗತ್ಯವಿಲ್ಲ: ಶಾಸಕ ವೀರಣ್ಣ ಚರಂತಿಮಠ ಮನವಿ
Last Updated 14 ಮಾರ್ಚ್ 2020, 13:01 IST
ಅಕ್ಷರ ಗಾತ್ರ

ಬಾಗಲಕೋಟೆ: ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪ್ರಕರಣ ಇಲ್ಲಿಯವರೆಗೆ ಯಾವುದೂ ವರದಿಯಾಗಿಲ್ಲ. ಜನತೆ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಶಾಸಕ ವೀರಣ್ಣ ಚರಂತಿಮಠ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಸಾರ್ವಜನಿಕರು ಊರಲ್ಲಿ ಸ್ವಚ್ಚತೆ ಕಾಪಾಡಿಕೊಳ್ಳಬೇಕು. ಬಿಸಿ ನೀರು ಕುಡಿಯಬೇಕು. ಕೈಗಳನ್ನು ಸ್ವಚ್ಛವಾಗಿ ತೊಳೆದುಕೊಳ್ಳಬೇಕು. ಜನದಟ್ಟಣೆಯಿಂದ ದೂರವಿರಬೇಕು. ಮಾರ್ಚ್ ನಂತರ ಬಿಸಿಲಿನ ತಾಪ ಹೆಚ್ಚಾಗಲಿದೆ. ಕೊರೊನಾ ವೈರಸ್ ಹೆಚ್ಚಿನ ಉಷ್ಣಾಂಶದಲ್ಲಿ ವೈರಸ್ ಬದುಕುವುದಿಲ್ಲ ಎಂದು ತಿಳಿಸಿದರು.

ಗ್ರಾಮೀಣ ಭಾಗದಲ್ಲಿ ವೈದ್ಯರ ಕೊರತೆ ಕಂಡುಬಂದಲ್ಲಿ ಕುಮಾರೇಶ್ವರ ಆಸ್ಪತ್ರೆಯ ವೈದ್ಯರನ್ನು ನಿಯೋಜಿಸಲಾಗುವುದು ಎಂದರು.

ಆಯಾ ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿಗಳ ಸಭೆ ಕರೆದು ಪ್ರತಿ ಗ್ರಾಮಗಳಲ್ಲಿ ಸ್ವಚ್ಛತೆಗೆ ಹೆಚ್ಚು ಒತ್ತು ಕೊಡಬೇಕು. ಕುಡಿಯಲು ಬಿಸಿನೀರು ಬಳಸುವಂತೆ ಡಂಗುರ ಸಾರಬೇಕು. ಗ್ರಾಮಗಳಲ್ಲಿ ಕಸ ಸ್ವಚ್ಛಗೊಳಿಸಿ ಒಂದೆಡೆ ಸುಟ್ಟು ಹಾಕಲು ಕ್ರಮಕೈಗೊಳ್ಳಿ. ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಫಾಗಿಂಗ್ ಕಾರ್ಯ ಕೈಗೊಳ್ಳಿ ಎಂದು ಮನವಿ ಮಾಡಿದರು.

ಸೋಂಕು ತಗುಲಿದ ವ್ಯಕ್ತಿ ಚಿಕಿತ್ಸೆ ಮಾಡುವುವವರಿಗೆ ಮಾತ್ರ ಎನ್-95 ಮಾಸ್ಕ ಕಡ್ಡಾಯವಾಗಿದೆ. ಕೆಮ್ಮುವಾಗ, ಸೀನುವಾಗ ಕರವಸ್ತ್ರಗಳನ್ನು ಬಳಸಬಹುದಾಗಿದೆ ಎಂದರು.

ಕೊರೊನಾ ವೈರಸ್ ಶಂಕಿತರ ಚಿಕಿತ್ಸೆಗಾಗಿ ನವನಗರದ ಜಿಲ್ಲಾ ಆಸ್ಪತ್ರೆ, ಕುಮಾರೇಶ್ವರ ಆಸ್ಪತ್ರೆ, ಆಯಾ ತಾಲ್ಲೂಕು ಆಸ್ಪತ್ರೆಗಳಲ್ಲಿ ಐಸೋಲೇಟೆಡ್ ವಾರ್ಡ್ ಗಳನ್ನು ಸಿದ್ಧಪಡಿಸಲಾಗಿದ್ದು, ಒಟ್ಟು 50 ಹಾಸಿಗೆಗಳ ವ್ಯವಸ್ಥೆ ಮಾಡಲಾಗಿದೆ.ಇಲ್ಲಿಯವರೆಗೆ ಜಿಲ್ಲೆಯಲ್ಲಿ ವಿದೇಶದಿಂದ ಮರಳಿದ 16 ಮಂದಿಯ ಮೇಲೆ ನಿಗಾ ಇಡಲಾಗಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೊಕೋಶ ಜಗಲಾಸರ, ಜಿಲ್ಲಾ ಪಂಚಾಯ್ತಿ ಸಿಇಒ ಗಂಗೂಬಾಯಿ ಮಾನಕರ, ಉಪವಿಭಾಗಾಧಿಕಾರಿ ಎಂ.ಗಂಗಪ್ಪ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎ.ಎನ್.ದೇಸಾಯಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಪ್ರಕಾಶ ಬಿರಾದಾರ, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಹೆಬ್ಬಳ್ಳಿ, ಕುಟುಂಬ ಕಲ್ಯಾಣಾಧಿಕಾರಿ ಡಾ.ಡಿ.ಬಿ.ಪಟ್ಟಣಶೆಟ್ಟಿ, ಜಿಲ್ಲಾ ಸಮೀಕ್ಷಣಾಧಿಕಾರಿ ಡಾ.ವಿಜಯ್ ಕಂಠಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT