ಇಲ್ಲಿಯವರೆಗೆ ಹಸಿರು ವಲಯದಲ್ಲಿದ್ದ ಬೀಳಗಿ ತಾಲ್ಲೂಕಿನಲ್ಲಿ ಇದೇ ಮೊದಲ ಬಾರಿಗೆ ಸೋಂಕು ದೃಢಪಟ್ಟಿದೆ. ಎಲ್ಲರೂ ಮುಂಬೈ ಸೇರಿದಂತೆ ಮಹಾರಾಷ್ಟ್ರದ ವಿವಿಧೆಡೆಯಿಂದ ಮರಳಿದವರು. ಸಾಂಸ್ಥಿಕ ಕ್ವಾರೆಂಟೈನ್ನಲ್ಲಿ ಇಡಲಾಗಿತ್ತು. ಅಲ್ಲಿ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೆ ಕಳುಹಿಸಿದಾಗ ಪಾಸಿಟಿವ್ ಬಂದಿದೆ. ಯಾರಿಗೂ ಸೋಂಕಿನ ಲಕ್ಷಣ ಇಲ್ಲ. ಎಲ್ಲರನ್ನೂ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಅನಂತ ದೇಸಾಯಿ ’ಪ್ರಜಾವಾಣಿ‘ಗೆ ಪ್ರತಿಕ್ರಿಯಿಸಿದರು.