ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಗಲಕೋಟೆ: ಮತ್ತೆ 9 ಮಂದಿಗೆ ಕೋವಿಡ್–19 ಸೋಂಕು ದೃಢ

Last Updated 2 ಜೂನ್ 2020, 16:13 IST
ಅಕ್ಷರ ಗಾತ್ರ

ಬಾಗಲಕೋಟೆ: ಜಿಲ್ಲೆಯಲ್ಲಿ ಮಂಗಳವಾರ ಒಂಬತ್ತು ಮಂದಿಗೆ ಕೋವಿಡ್–19 ಸೋಂಕು ದೃಢಪಟ್ಟಿದೆ. ಇವರಲ್ಲಿ ಮುಧೋಳದ ಐವರು, ಬೀಳಗಿಯ ಮೂವರು ಹಾಗೂ ಬಾದಾಮಿಯ ಒಬ್ಬರು ಸೇರಿದ್ದಾರೆ.

ಇಲ್ಲಿಯವರೆಗೆ ಹಸಿರು ವಲಯದಲ್ಲಿದ್ದ ಬೀಳಗಿ ತಾಲ್ಲೂಕಿನಲ್ಲಿ ಇದೇ ಮೊದಲ ಬಾರಿಗೆ ಸೋಂಕು ದೃಢಪಟ್ಟಿದೆ. ಎಲ್ಲರೂ ಮುಂಬೈ ಸೇರಿದಂತೆ ಮಹಾರಾಷ್ಟ್ರದ ವಿವಿಧೆಡೆಯಿಂದ ಮರಳಿದವರು. ಸಾಂಸ್ಥಿಕ ಕ್ವಾರೆಂಟೈನ್‌ನಲ್ಲಿ ಇಡಲಾಗಿತ್ತು. ಅಲ್ಲಿ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೆ ಕಳುಹಿಸಿದಾಗ ಪಾಸಿಟಿವ್ ಬಂದಿದೆ. ಯಾರಿಗೂ ಸೋಂಕಿನ ಲಕ್ಷಣ ಇಲ್ಲ. ಎಲ್ಲರನ್ನೂ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಅನಂತ ದೇಸಾಯಿ ’ಪ್ರಜಾವಾಣಿ‘ಗೆ ಪ್ರತಿಕ್ರಿಯಿಸಿದರು.

ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 88ಕ್ಕೆ ಏರಿಕೆಯಾಗಿದೆ. 75 ವರ್ಷದ ವೃದ್ಧರೊಬ್ಬರು ಸಾವಿಗೀಡಾಗಿದ್ದಾರೆ. 71 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿ ಮನೆಗೆ ಮರಳಿದ್ದಾರೆ. 16 ಸಕ್ರಿಯ ಪ್ರಕರಣಗಳು ಇವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT