ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

35 ಪ್ರಕರಣ ದಾಖಲು:₹6.5 ಲಕ್ಷ ದಂಡ ವಸೂಲಿ

ದುಪ್ಪಟ್ಟು ಬೆಲೆಗೆ ಮುಖಗವಸ ಮಾರಾಟ: ಮೆಡಿಕಲ್ ಶಾಪ್‌ಗಳ ಮೇಲೆ ವಾಣಿಜ್ಯ ತೆರಿಗೆ ಅಧಿಕಾರಿಗಳ ದಾಳಿ
Last Updated 5 ಮಾರ್ಚ್ 2020, 14:05 IST
ಅಕ್ಷರ ಗಾತ್ರ

ಬಾಗಲಕೋಟೆ: ಕೋವಿಡ್–19 ಸೋಂಕಿನ ಬಗ್ಗೆ ಸಾರ್ವಜನಿಕರಲ್ಲಿನ ಭೀತಿಯನ್ನೇ ಲಾಭವಾಗಿಸಿಕೊಂಡು ದುಪ್ಪಟ್ಟು ಬೆಲೆಗೆ ಮುಖಗವಸ (ಮಾಸ್ಕ್) ಮಾರಾಟ ಮಾರುತ್ತಿದ್ದ ಬೆಳಗಾವಿ ವಿಭಾಗದ ವಿಜಯಪುರ, ಬಾಗಲಕೋಟೆ ಹಾಗೂ ಬೆಳಗಾವಿ‌ ನಗರಗಳ ವಿವಿಧ ಔಷಧಿ ಅಂಗಡಿಗಳ (ಮೆಡಿಕಲ್ ಶಾಪ್‌) ಮೇಲೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ಗುರುವಾರ ದಿಢೀರ್ ದಾಳಿ ನಡೆಸಿದ್ದಾರೆ.

ಬಿಲ್ ಕೊಡದೇ ಹೆಚ್ಚಿನ ಬೆಲೆಗೆ ಮುಖಗವಸ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ 35 ಔಷಧಿ ಅಂಗಡಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತಲಾ ₹20 ಸಾವಿರದಂತೆ ₹6.50 ಲಕ್ಷ ದಂಡ ವಸೂಲಿ ಮಾಡಿದ್ದಾರೆ.

ಈ ಮುಖಗವಸಗಳನ್ನು ಸರಕು ಹಾಗೂ ಸೇವಾ ತೆರಿಗೆ (ಜಿಎಸ್‌ಟಿ) ಪಾವತಿಸದೇ ಗೋವಾ ಹಾಗೂ ಮಹಾರಾಷ್ಟ್ರ ರಾಜ್ಯಗಳಿಂದ ಖರೀದಿಸಿ ತಂದು ಇಲ್ಲಿ ಹೆಚ್ಚಿನ ದರಕ್ಕೆ ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಆಧರಿಸಿ ಗ್ರಾಹಕರ ಸೋಗಿನಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದರು. ಬೆಳಗಾವಿ ಉತ್ತರ ವಲಯದ ಜಾರಿ ವಿಭಾಗದ ಜಂಟಿ ಆಯುಕ್ತ ಕೆ.ರಾಮನ್ ನೇತೃತ್ವದಲ್ಲಿ 15 ಅಧಿಕಾರಿಗಳುಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಕೋವಿಡ್–19 ಸೋಂಕಿನ ಭೀತಿ ಆವರಿಸುತ್ತಿದ್ದಂತೆಯೇ ಮುಖಗವಸದ ಬೆಲೆ ಏಕಾಏಕಿ ಗಗನಮುಖಿಯಾಗಿರುವ ಬಗ್ಗೆ ’ಪ್ರಜಾವಾಣಿ’ ಗುರುವಾರ ವರದಿ ಪ್ರಕಟಿಸಿದ್ದನ್ನು ಸ್ಮರಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT