ಗುರುವಾರ , ಆಗಸ್ಟ್ 5, 2021
22 °C

ಮತ್ತೆ ಮೂವರಿಗೆ ಕೊರೊನಾ ಸೋಂಕು ದೃಢ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಗಲಕೋಟೆ: ಜಿಲ್ಲೆಯಲ್ಲಿ ಸೋಮವಾರ ಮತ್ತೆ ಮೂವರಿಗೆ ಕೋವಿಡ್–19 ಸೋಂಕು ದೃಡಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 107ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.

ಮುಧೋಳ ತಾಲ್ಲೂಕಿನ ಬರಗಿ ಗ್ರಾಮದ 23 ವರ್ಷದ ಯುವಕ (ಪಿ-7027), ಜಮಖಂಡಿ ತಾಲ್ಲೂಕಿನ ಘೋಠೆ ಗ್ರಾಮದ 23 ವರ್ಷದ ಯುವಕ (ಪಿ-7028) ಹಾಗೂ 35 ವರ್ಷದ ವ್ಯಕ್ತಿಗೆ (ಪಿ-7029) ಕೋವಿಡ್–19 ಸೋಂಕು ದೃಢಪಟ್ಟಿದೆ. ಹೊಸದಾಗಿ ಸೊಂಕು ದೃಢಪಟ್ಟ ಯುವಕನು ದೆಹಲಿಯಿಂದ ಮರಳಿದ್ದರೆ, ಉಳಿದ ಇಬ್ಬರು ಮಹಾರಾಷ್ಟ್ರದಿಂದ ಹಿಂದಿರುಗಿದ್ದಾರೆ. ಅಲ್ಲಿನ ನಂಟಿನಿಂದ ಸೋಂಕು ತಗುಲಿರುವುದು ದೃಢಪಟ್ಟಿದೆ.

ಜಿಲ್ಲೆಯಲ್ಲಿ ಇಲ್ಲಿಯವರೆಗೆ ಕೋವಿಡ್-19 ಸೋಂಕಿನಿಂದ 89 ಮಂದಿ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಇನ್ನು 17 ಪ್ರಕರಣಗಳು ಮಾತ್ರ ಸಕ್ರಿಯವಾಗಿವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು