ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಗಲಕೋಟೆ | ಬಾಲಕ ಸೇರಿ ಮೂವರಿಗೆ ಸೋಂಕು ದೃಢ

ಕೋವಿಡ್–19 ದೃಢಪಟ್ಟವರ ಸಂಖ್ಯೆ 24ಕ್ಕೆ ಏರಿಕೆ
Last Updated 24 ಏಪ್ರಿಲ್ 2020, 13:09 IST
ಅಕ್ಷರ ಗಾತ್ರ

ಬಾಗಲಕೋಟೆ: ಕಳೆದ ನಾಲ್ಕುದಿನಗಳಿಂದ ಹೊಸ ಪ್ರಕರಣಗಳು ವರದಿಯಾಗದೇ ನಿರುಮ್ಮಳವಾಗಿದ್ದ ಜಿಲ್ಲೆಯ ಜನರಿಗೆ ಶುಕ್ರವಾರ ಮತ್ತೆ ಮೂವರಿಗೆ ಕೋವಿಡ್-19 ದೃಢಪಟ್ಟಿರುವುದು ಆತಂಕ ಮೂಡಿಸಿದೆ.

ಜಮಖಂಡಿಯ 46 ವರ್ಷದ ವ್ಯಕ್ತಿಗೆ ದೃಢಪಟ್ಟಿದೆ. ಅವರಿಗೆ ಯಾವುದೇ ಪ್ರವಾಸದ ಇತಿಹಾಸವಿಲ್ಲ. ಇನ್ನಷ್ಟೇ ಅವರ ಸಂಪರ್ಕಕ್ಕೆ ಬಂದವರ ಮಾಹಿತಿ ಕಲೆ ಹಾಕಬೇಕಿದೆ. ಮುಧೋಳದ ರೋಗಿ ಸಂಖ್ಯೆ 380 ಸಂಪರ್ಕಕ್ಕೆ ಬಂದ ಅವರ 14 ವರ್ಷದ ಪುತ್ರ ಹಾಗೂ ಎದುರು ಮನೆಯ 28 ವರ್ಷದ ಯುವಕನಿಗೆ ಸೋಂಕು ದೃಢಪಟ್ಟಿದೆ.

ಮೂವರನ್ನೂ ಬಾಗಲಕೋಟೆಯ ಕೋವಿಡ್-19 ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಇದರಿಂದ ಜಿಲ್ಲೆಯಲ್ಲಿ ಇಲ್ಲಿಯವರೆಗೆ 24 ಮಂದಿಗೆ ಕೋವಿಡ್-19 ಸೋಂಕು ದೃಢಪಟ್ಟಂತಾಗಿದೆ. ಅವರಲ್ಲಿ 75 ವರ್ಷದ ವೃದ್ಧ ಸಾವಿಗೀಡಾಗಿದ್ದಾರೆ. ಇಬ್ಬರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT