ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಗಲಕೋಟೆ | ಮುಂಬೈನಿಂದ ಮರಳಿದ್ದ ವ್ಯಕ್ತಿಗೆ ಕೋವಿಡ್-19 ಸೋಂಕು ದೃಢ

Last Updated 16 ಮೇ 2020, 8:44 IST
ಅಕ್ಷರ ಗಾತ್ರ

ಬಾಗಲಕೋಟೆ: ಬಾದಾಮಿ ತಾಲ್ಲೂಕಿನ ಕುಳಗೇರಿ ಗ್ರಾಮದ 33 ವರ್ಷದ ವ್ಯಕ್ತಿಗೆ ಶನಿವಾರ ಕೋವಿಡ್-19 ಸೋಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 71ಕ್ಕೆ ಏರಿಕೆಯಾಗಿದೆ.

ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಶುಶ್ರೂಷಕ ಸಿಬ್ಬಂದಿಯಾಗಿದ್ದ ಅವರು ಮೇ 12ರಂದು ಕುಳಗೇರಿಯ ತೋಟದ ಮನೆಗೆ ಮರಳಿದ್ದರು. ಸುದ್ದಿ ತಿಳಿದು ತಾಲ್ಲೂಕು ಆಡಳಿತ ಆವರನ್ನು ಕ್ವಾರಂಟೈನ್ ಗೆ ಒಳಪಡಿಸಿತ್ತು.

ಈ ವೇಳೆ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಎರಡು ದಿನಗಳ ಹಿಂದೆ ಜಿಲ್ಲಾಸ್ಪತ್ರೆಗೆ ದಾಖಲಿಸಿ ಗಂಟಲು ದ್ರವದ ಮಾದರಿ ಪರೀಕ್ಷೆಗೆ ಕಳುಹಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT