ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿಯಿಂದ ಮರಳಿದ್ದ ವ್ಯಕ್ತಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಕ್ವಾರೆಂಟೈನ್

Last Updated 1 ಏಪ್ರಿಲ್ 2020, 6:16 IST
ಅಕ್ಷರ ಗಾತ್ರ

ಬಾಗಲಕೋಟೆ: ದೆಹಲಿಯ ನಿಜಾಮುದ್ದೀನ್ ಪ್ರದೇಶದ ತಬ್ಲೀಗ್ ಜಮಾತ್ ನ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ನಗರದ ಒಬ್ಬ ವ್ಯಕ್ತಿಯನ್ನು ಬುಧವಾರ ಇಲ್ಲಿನ ಜಿಲ್ಲಾ ಆಸ್ಪತ್ರೆಯ ಐಸೊಲೇಶನ್ ವಾರ್ಡ್ ನಲ್ಲಿ ನಿಗಾದಲ್ಲಿ ಇಡಲಾಗಿದೆ.

ಆ ವ್ಯಕ್ತಿಯಲ್ಲಿ ಕೊರೊನಾ ಸೋಂಕಿನ ಲಕ್ಷಣ ಕಂಡು ಬಂದಿಲ್ಲ. ಆದರೂ ಮುಂಜಾಗರೂಕತಾ ಕ್ರಮವಾಗಿ ಕ್ವಾರೆಂಟೈನ್ ಗೆ ಒಳಪಡಿಸಿದ್ದೇವೆ. ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗುವುದು. ಆ ವ್ಯಕ್ತಿಯ ಜೊತೆ ಸಂಪರ್ಕದಲ್ಲಿದ್ದವರ ಮೇಲೂ ನಿಗಾ ಇಡಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಅನಂತ ದೇಸಾಯಿ ತಿಳಿಸಿದರು.

ದೆಹಲಿಯಲ್ಲಿ ಧಾರ್ಮಿಕ ಸಮಾವೇಶದಲ್ಲಿ ಜಿಲ್ಲೆಯ ಇನ್ನಷ್ಟು ಮಂದಿ ಭಾಗವಹಿಸಿರುವ ಮಾಹಿತಿ ಇದೆ. ಅವರ ಪತ್ತೆ ಕಾರ್ಯ ನಡೆದಿದೆ. ದೆಹಲಿಗೆ ಹೋಗಿ ಬಂದವರು ತಕ್ಷಣ ತಹಶೀಲ್ದಾರ ಕಚೇರಿಗೆ ತೆರಳಿ ಮಾಹಿತಿ ನೀಡುವಂತೆ ಜಿಲ್ಲಾ ವಕ್ಫ್ ಸಮಿತಿ ಮೂಲಕ ಮಸೀದಿಗಳಲ್ಲಿ ಪ್ರಕಟಣೆ ಹೊರಡಿಸಲಾಗಿದೆ ಎಂದರು.

ಮುಧೋಳದ ಆರು ಮಂದಿ, ಬಾಗಲಕೋಟೆ ತಾಲ್ಲೂಕಿನ ಕಲಾದಗಿಯ ಇಬ್ಬರು ಸೇರಿದಂತೆ ಜಿಲ್ಲೆಯಿಂದ 16 ಜನರು ದೆಹಲಿಯ ಧಾರ್ಮಿಕ ಸಮಾವೇಶದಲ್ಲಿ ಭಾಗವಹಿಸಿದ್ದರು ಎಂಬ ಮಾಹಿತಿ ಇದೆ. ಅವರನ್ನು ಸಂಪರ್ಕಿಸುವ ಕಾರ್ಯ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT