ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಡಿಯೊ ಸುದ್ದಿ: ಕೋವಿಡ್-19 ಗುಣಮುಖರಾದ ಮೂವರು ಆಸ್ಪತ್ರೆಯಿಂದ ಬಿಡುಗಡೆ

ಬಾಗಲಕೋಟೆ
Last Updated 4 ಮೇ 2020, 13:38 IST
ಅಕ್ಷರ ಗಾತ್ರ

ಬಾಗಲಕೋಟೆ: ಚಿಕಿತ್ಸೆ ಪಡೆದು ಗುಣಮುಖರಾದ ಮೂವರು ಕೋವಿಡ್-19 ಸೋಂಕಿತರು ಸೋಮವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಗೆ ತೆರಳಿದರು.

ಇದರಿಂದ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ಇಲ್ಲಿಯವರೆಗೆ ಒಟ್ಟು 33 ಮಂದಿಗೆ ಸೋಂಕು ದೃಢಪಟ್ಟಿದೆ. 75 ವರ್ಷದ ವೃದ್ಧ ಸಾವಿಗೀಡಾಗಿದ್ದಾರೆ.

ಬಾಗಲಕೋಟೆ ನಿವಾಸಿ 65 ವರ್ಷದ ವೃದ್ಧ ಹಾಗೂ ಅವರ ಸಂಬಂಧಿ 49 ವರ್ಷದ ಮಹಿಳೆ ಮತ್ತು ಜಮಖಂಡಿಯ 47 ವರ್ಷದ ಸೆಂಟ್ರಿಂಗ್ ಗುತ್ತಿಗೆದಾರ ಸೋಂಕಿನಿಂದ ಗುಣಮುಖರಾದವರು.

ಜಿಲ್ಲಾ ಆಸ್ಪತ್ರೆ ಶಸ್ತ್ರಚಿಕಿತ್ಸಕ ಡಾ.ಪ್ರಕಾಶ ಬಿರಾದಾರ, ತಜ್ಞ ವೈದ್ಯ ಡಾ.ಚಂದ್ರಕಾಂತ ಜವಳಿ ನೇತೃತ್ವದಲ್ಲಿ ಆಸ್ಪತ್ರೆಯ ವೈದ್ಯರು, ವೈದ್ಯಕೀಯ ಸಿಬ್ಬಂದಿ ಸೇರಿ ಚಪ್ಪಾಳೆ ತಟ್ಟಿ ಅಭಿನಂದಿಸಿ, ಸ್ಮರಣಿಕೆಗಳನ್ನು ನೀಡಿ ಮೂವರನ್ನು ಬೀಳ್ಕೊಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT