ಭಾನುವಾರ, 14 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶ ಅಭಿವೃದ್ಧಿ ಮೋದಿಯಿಂದ ಮಾತ್ರ ಸಾಧ್ಯ: ಸಂಸದ ಪಿ.ಸಿ.ಗದ್ದಿಗೌಡರ

Published 19 ಮಾರ್ಚ್ 2024, 14:18 IST
Last Updated 19 ಮಾರ್ಚ್ 2024, 14:18 IST
ಅಕ್ಷರ ಗಾತ್ರ

ರಬಕವಿ ಬನಹಟ್ಟಿ: ಹತ್ತು ವರ್ಷಗಳಲ್ಲಿ ಪ್ರಧಾನಿ ಮೋದಿ ಭಾರತವನ್ನು ವಿಶ್ವದ ಶ್ರೇಷ್ಠ ರಾಷ್ಟ್ರವನ್ನಾಗಿಸಿದ್ಧಾರೆ. ಜನರಿಗೆ ಹತ್ತಾರು ಮಹತ್ವದ ಕಾರ್ಯಕ್ರಮಗಳನ್ನು ನೀಡಿದೆ. ದೇಶದ ಅಭಿವೃದ್ಧಿ ಮೋದಿಯಿಂದ ಮಾತ್ರ ಸಾಧ್ಯ ಎಂದು ಸಂಸದ ಪಿ.ಸಿ.ಗದ್ದಿಗೌಡರ ತಿಳಿಸಿದರು.

ಇಲ್ಲಿನ ಬಿಜೆಪಿ ಕಾರ್ಯಾಲಯದಲ್ಲಿ ಈಚೆಗೆ ನಡೆದ ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಶಾಸಕ ಸಿದ್ದು ಸವದಿ ಮಾತನಾಡಿ, ನಾವೆಲ್ಲರೂ ಒಗ್ಗಟ್ಟಾಗಿ ಕೇಂದ್ರ ಮತ್ತು ಕರ್ನಾಟಕದಲ್ಲಿ ಆಡಳಿತ ನಡೆಸಿದ ಬಿಜೆಪಿ ಸರ್ಕಾರದ ಸಾಧನೆಗಳನ್ನು ಮನೆ ಮನೆಗೆ ತಲುಪಿಸುವು ಕಾರ್ಯ ಮಾಡಬೇಕು. ಭಾರತ ಶೀಘ್ರವೇ ವಿಶ್ವದ ಶ್ರೇಷ್ಠ ಆರ್ಥಿಕ ಶಕ್ತಿಯಾಗಿ ನಿರ್ಮಾಣಗೊಳ್ಳಲಿದೆ. ಆದ್ದರಿಂದ ಈ ಬಾರಿ ಮತ್ತೊಮ್ಮೆ ಮೋದಿಯವರನ್ನು ಪ್ರಧಾನಿಯನ್ನಾಗಿಸುವ ಜವಾಬ್ದಾರಿ ಪಕ್ಷದ ಕಾರ್ಯಕರ್ತರ ಮೇಲಿದೆ ಎಂದು ತಿಳಿಸಿದರು.

ಜಿಲ್ಲಾ ಘಟಕದ ಅಧ್ಯಕ್ಷ ಶಾಂತಾಗೌಡ ಪಾಟೀಲ, ನಿಂಗರಾಜ ಪಾಟೀಲ, ಶಂಕರ ಹುನ್ನೂರ ಮಾತನಾಡಿದರು.

ರಾಜ್ಯ ಸಭಾ ಸದಸ್ಯ ನಾರಾಯಣಸಾ ಭಾಂಡಗೆ, ಶ್ರೀಶೈಲಗೌಡ ಬಿರಾದಾರ, ಧರೆಪ್ಪ ಉಳ್ಳಾಗಡ್ಡಿ, ರಾಜು ನಾಯ್ಕರ್, ಮಲ್ಲಯ್ಯ ಮುಗಳೂರುಮಠ, ಶ್ರೀಶೈಲ ಬೀಳಗಿ, ಪುಂಡಲೀಕ ಪಾಲಭಾವಿ, ಡಿ.ಆರ್. ಪಾಟೀಲ, ಅನೇಕರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT