ಶುಕ್ರವಾರ, ಜುಲೈ 30, 2021
20 °C

ಬಾಗಲಕೋಟೆ: ನಾಲ್ವರಿಗೆ ಕೋವಿಡ್–19 ಸೋಂಕು ದೃಢ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಾಗಲಕೋಟೆ: ಜಿಲ್ಲೆಯಲ್ಲಿ ಭಾನುವಾರ ಮತ್ತೆ ನಾಲ್ವರಿಗೆ ಕೋವಿಡ್–19 ಸೋಂಕು ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 104ಕ್ಕೆ ಏರಿಕೆಯಾಗಿದೆ.

ಬಾದಾಮಿ ತಾಲ್ಲೂಕಿನ ಯಂಡಿಗೇರಿ ಗ್ರಾಮದ 26 ವರ್ಷದ ಯುವಕ (ಪಿ-6828), ಗುಳೇದಗುಡ್ಡದ 54 ವರ್ಷದ ಮಹಿಳೆ (ಪಿ-6829) ಹಾಗೂ 28 ವರ್ಷದ ಮಹಿಳೆ (ಪಿ-6830) ಮತ್ತು ರಬಕವಿಯ 25 ವರ್ಷದ ಪುರುಷ (ಪಿ-6831) ಹೊಸದಾಗಿ ಸೋಂಕು ದೃಢಪಟ್ಟವರು.

ಯಂಡಿಗೇರಿಯ ಯುವಕ ಆಂಧ್ರಪ್ರದೇಶದಿಂದ ಮರಳಿದ್ದಾರೆ. ಉಳಿದವರು ಮಹಾರಾಷ್ಟ್ರದಿಂದ ಬಂದವರಾಗಿದ್ದು, ಅಲ್ಲಿನ ನಂಟಿನಿಂದ ಸೋಂಕು ತಗಲಿರುವುದು ದೃಢಪಟ್ಟಿದೆ.

104 ಮಂದಿ ಸೋಂಕಿತರ ಪೈಕಿ 89 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿ ಮನೆಗೆ ಮರಳಿದ್ದಾರೆ. 75 ವರ್ಷದ ವೃದ್ಧರೊಬ್ಬರು ಸಾವಿಗೀಡಾಗಿದ್ದಾರೆ. 14 ಪ್ರಕರಣಗಳು ಮಾತ್ರ ಸಕ್ರಿಯವಾಗಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು