ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್–19 ಸೋಂಕು; ಇಬ್ಬರು ಸಾವು

ವೀರಾಪುರದ 47 ವರ್ಷದ ಪುರುಷ, ಖಜ್ಜಿಡೋಣಿಯ 45 ವರ್ಷದ ಮಹಿಳೆ
Last Updated 11 ಜುಲೈ 2020, 14:13 IST
ಅಕ್ಷರ ಗಾತ್ರ

ಬಾಗಲಕೋಟೆ: ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್‌–19 ಪಾಸಿಟಿವ್ ಇದ್ದ ಇಬ್ಬರು ಸಾವಿಗೀಡಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿನಿಂದ ಸತ್ತವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.

ಬಾಗಲಕೋಟೆ ತಾಲ್ಲೂಕಿನ ವೀರಾಪುರ ಗ್ರಾಮದ 47 ವರ್ಷದ ವ್ಯಕ್ತಿ ಶುಕ್ರವಾರ ತಡರಾತ್ರಿ ನಿಧನರಾಗಿದ್ದಾರೆ. ಮೂಲತಃ ಸಮೀಪದ ಶಿಕ್ಕೇರಿಯವರಾದ ಅವರು ಕುಟುಂಬ ಸಮೇತ ವೀರಾಪುರದಲ್ಲಿ ನೆಲೆಸಿದ್ದರು. ಇಲ್ಲಿನ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ದಿನಗೂಲಿ ನೌಕರರಾಗಿ ಕೆಲಸ ಮಾಡುತ್ತಿದ್ದರು.

ಹುಬ್ಬಳ್ಳಿಗೆ ಜುಲೈ 3ರಂದು ಸಂಬಂಧಿಕರ ಮದುವೆ ಸಮಾರಂಭಕ್ಕೆ ಹೋಗಿ ಬಂದಿದ್ದ ಅವರು, ನಂತರ ಅನಾರೋಗ್ಯಕ್ಕೆ ತುತ್ತಾಗಿದ್ದರು. ಕೋವಿಡ್–19 ಲಕ್ಷಣಗಳಿದ್ದ ಕಾರಣ ಅವರನ್ನು ಇಲ್ಲಿನ ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು. ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಸಾವಿನ ನಂತರ ಅವರ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ವರದಿ ಪಾಸಿಟಿವ್ ಬಂದಿದೆ.

ಮಹಿಳೆ ಸಾವು: ಬಾಗಲಕೋಟೆ ತಾಲ್ಲೂಕಿನ ಖಜ್ಜಿಡೋಣಿ ಗ್ರಾಮದ 45 ವರ್ಷದ ಮಹಿಳೆ ಕೋವಿಡ್–19ನಿಂದ ಶನಿವಾರ ಸಾವಿಗೀಡಾಗಿದ್ದಾರೆ. ಅವರಿಗೆ ಜೂನ್ 29ರಂದು ಕೊರೊನಾ ಸೋಂಕು ದೃಢಪಟ್ಟಿತ್ತು. ಆಗಿನಿಂದಲೂ ಇಲ್ಲಿನ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾಗಿದ್ದಾರೆ.

ಕೋವಿಡ್ ನಿಯಮಾವಳಿಯಂತೆ ಇಬ್ಬರ ಅಂತ್ಯಕ್ರಿಯೆ ನೆರವೇರಿಸಲಾಗಿದೆ. ವೀರಾಪುರ ಹಾಗೂ ಖಜ್ಜಿಡೋಣಿಯಲ್ಲಿ ಅವರ ಸಂಪರ್ಕದಲ್ಲಿದ್ದವರನ್ನು ಕ್ವಾರೆಂಟೈನ್‌ ಮಾಡಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಅನಂತ ದೇಸಾಯಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT