ಬಾಗಲಕೋಟೆ: ಬೆಳೆ ಹಾನಿ ಅಪಾಯ ತಪ್ಪಿಸಲು ರೈತರಲ್ಲಿ ಬೆಳೆ ವಿಮೆ ಬಗ್ಗೆ ಹೆಚ್ಚಿನ ಅರಿವು ಮೂಡಿಸುವ ಕಾರ್ಯ ಮಾಡಬೇಕು ಎಂದು ಸಂಸದ ಪಿ.ಸಿ. ಗದ್ದಿಗೌಡರ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ‘ದಿಶಾ’ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಈ ಬಾರಿ ಮೊದಲಿಗಿಂತ ಅಧಿಕ ಪ್ರಮಾಣದಲ್ಲಿ ಈರುಳ್ಳಿ, ದಾಳಿಂಬೆ ಬೆಳೆಯಲಾಗಿದ್ದು, ರೈತರು ಮೊದಲೇ ಬೆಳೆ ವಿಮೆ ಮಾಡಿಸಿಕೊಂಡಿದ್ದಲ್ಲಿ, ಬೆಳೆ ಹಾನಿಯಂತಹ ಅಪಾಯವನ್ನು ಸಮರ್ಥವಾಗಿ ಎದುರಿಸಬಹುದಾಗಿದೆ ಎಂದರು.

ಬಾಗಲಕೋಟೆ-ಕುಡಚಿ ರೈಲು ಮಾರ್ಗ ಕಾಮಗಾರಿ ಸ್ಥಿತಿ ಪರಿಶೀಲಿಸಿ, ಕೇಂದ್ರದಲ್ಲಿ ಅನುದಾನ ಮತ್ತು ಸಂಪನ್ಮೂಲಕ್ಕೆ ಕೊರತೆ ಇರುವುದಿಲ್ಲ, ಆದರೆ, ಭೂ ಮಾಲೀಕರ ಕುಟುಂಬ ವ್ಯಾಜ್ಯದಿಂದಾಗಿ ಯೋಜನೆ ವಿಳಂಬವಾಗಿದೆ. ಸ್ಥಳಿಯ ಸಮಸ್ಯೆಗಳನ್ನು ಬೇಗ ಪರಿಹರಿಸಬೇಕು ಎಂದು ಜಿಲ್ಲಾಡಳಿತ, ರೈಲ್ವೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಲಜೀವನ್ ಮಿಷನ್ ಯೋಜನೆಯಡಿ ಪೂರ್ಣಗೊಳಿಸಿರುವಂತಹ 608 ಕಾಮಗಾರಿಗಳಲ್ಲಿ ಯಾವುದಾದರೂ ಒಂದು ದೂರು ಬಂದರೂ ಕೂಡ ತಕ್ಷಣ ಪರಿಶೀಲಿಸಬೇಕು. ಪ್ರಧಾನಮಂತ್ರಿ ಆವಾಸ್ ಯೋಜನೆ ಮೊತ್ತ ಹೆಚ್ಚಿಸುವಂತೆ ಸರ್ಕಾರಕ್ಕೆ ಮನವಿ ಮಾಡಲಾಗುವುದು. ಎರಡನೇ ಹಂತದಲ್ಲಿರುವ ಪ್ರಧಾನಮಂತ್ರಿ ಆವಾಸ್ ಯೋಜನೆ ಫಲಾನುಭವಿಗಳ ಅಂಕಿ– ಸಂಖ್ಯೆ ಮಾಹಿತಿ ನೀಡುವಂತೆ ತಿಳಿಸಿದರು.

ಜಿಲ್ಲೆಯಲ್ಲಿ ಪೋಕ್ಸೊ ಪ್ರಕರಣಗಳ ನಿಯಂತ್ರಣಕ್ಕೆ ಸೂಕ್ತ ಜಾಗೃತಿ ಅಗತ್ಯವಾಗಿದೆ. ಪ್ರಕರಣಗಳಲ್ಲಿ ಶಿಕ್ಷೆಗೊಳಗಾದವರ ಮತ್ತು ದಂಡದ ಮೊತ್ತದ ಕುರಿತು ಪ್ರಚಾರ ನೀಡಿದಲ್ಲಿ ಭಯದಿಂದ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತವೆ. ಗ್ರಾಮೀಣ ಪ್ರದೇಶಗಳಲ್ಲಿ ಕಾನೂನಿನ ಕುರಿತು ಅರಿವು ಮೂಡಿಸುವ ಕೆಲಸ ಮಾಡಬೇಕು ಎಂದರು.

ಕಾರ್ಮಿಕ ಇಲಾಖೆಯ ವಿವಿಧ ಯೋಜನೆಗಳಿಗೆ ಸಾಕಷ್ಟು ಜನರು ನೋಂದಣಿ ಮಾಡಿಕೊಂಡಿದ್ದು, ನಿಜವಾದ ಕಾರ್ಮಿಕರನ್ನ ಗುರುತಿಸಿ ಫಲಾನುಭವಿಗಳಿಗೆ ಸೌಲಭ್ಯ ನೀಡುವ ಕೆಲಸ ಅಧಿಕಾರಿಗಳಿಂದ ಆಗಬೇಕು ಎಂದು ಸೂಚಿಸಿದರು.

ರಾಜ್ಯಸಭಾ ಸದಸ್ಯ ನಾರಾಯಣ ಭಾಂಡಗೆ, ಜಿಲ್ಲಾಧಿಕಾರಿ ಸಂಗಪ್ಪ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.